ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ: ಘಟನೆಗೆ ಸಿಎಂ ತೀವ್ರ ಖಂಡನೆ, ಶಾಂತಿ-ಸೌಹರ್ದ ಕಾಪಾಡುವಂತೆ ಜನತೆಗೆ ಮನವಿ

ಬೆಂಗಳೂರು: ಬಾಗಲಕೋಟೆಯಲ್ಲಿ ನಡೆದ ಕಲ್ಲು ತೂರಾಟ ಘಟನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ತೀವ್ರ ಖಂಡನೆ ವ್ಯಕ್ತಪಡಿಸಿದ್ದು, ಶಾಂತಿ ಮತ್ತು ಸೌಹಾರ್ದ ಕಾಪಾಡಿಕೊಳ್ಳುವಂತೆ ರಾಜ್ಯದ ಜನತೆಗೆ ಮನವಿ ಮಾಡಿದ್ದಾರೆ.

ಘಟನೆ ಕುರಿತು ಪ್ರತಿಕ್ರಿಯೆ ನೀಡಿರುವ ಅವರು, ಬಾಗಲಕೋಟೆಯಲ್ಲಿ ನಡೆದ ಕಲ್ಲು ತೂರಾಟದ ಘಟನೆ ದುರದೃಷ್ಟಕರವಾದದ್ದು. ಎಲ್ಲಾ ನಾಗರಿಕರು ಶಾಂತಿ ಮತ್ತು ಸೌಹಾರ್ದತೆಯನ್ನು ಕಾಪಾಡಿಕೊಳ್ಳಬೇಕೆಂದು ನಾನು ಮನವಿ ಮಾಡುತ್ತೇನೆ. ಕರ್ನಾಟಕದ ಶಕ್ತಿ ಅದರ ಏಕತೆ ಮತ್ತು ಸಹೋದರತ್ವದಲ್ಲಿದೆ ಎಂದು ಹೇಳಿದ್ದಾರೆ. ಅಲ್ಲದೆ, ಜನರು ಯಾವುದೇ ಅಪಪ್ರಚಾರ ಅಥವಾ ಪ್ರಚೋದನೆಗಳಿಗೆ ಬಲಿಯಾಗಬಾರದು ಎಂದೂ ಮನವಿ ಮಾಡಿದ್ದಾರೆ.

Advertisement

ಘಟನೆ ಬೆನ್ನಲ್ಲೇ ಪೊಲೀಸರು ತಕ್ಷಣ ಕ್ರಮ ಕೈಗೊಂಡಿದ್ದು, ಈಗಾಗಲೇ ಕೆಲವರನ್ನು ಬಂಧಿಸಿದ್ದಾರೆ. ಘಟನೆಗೆ ಕಾರಣರಾದವರನ್ನು ಪತ್ತೆಹಚ್ಚಲು ಸಮಗ್ರ ತನಿಖೆ ನಡೆಸಲಾಗುತ್ತಿದ್ದು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ತಪ್ಪಿತಸ್ಥರು ಯಾರೇ ಆಗಿದ್ದರೂ ಕಾನೂನಿನ ಪ್ರಕಾರ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ. ರಾಜ್ಯದಲ್ಲಿ ಶಾಂತಿ ಮತ್ತು ಸೌಹಾರ್ದತೆ ಉಳಿಸುವುದು ಎಲ್ಲರ ಹೊಣೆಗಾರಿಕೆ ಎಂದು ಹೇಳಿದ್ದಾರೆ.

Share this article

Subscribe

By pressing the Subscribe button, you confirm that you have read our Privacy Policy.
Advertisement

More News

You cannot copy content of this page