T20 World Cup 2026: ಟಿ20 ವಿಶ್ವಕಪ್ 2026 ರಲ್ಲಿ ಆಸ್ಟ್ರೇಲಿಯಾ ತಂಡ ಈವರೆಗೆ 3 ಪಂದ್ಯಗಳನ್ನಾಡಿದೆ. ಮೊದಲ ಪಂದ್ಯದಲ್ಲಿ ಐರ್ಲೆಂಡ್ ವಿರುದ್ಧ ಜಯ ಸಾಧಿಸಿದ್ದ ಆಸ್ಟ್ರೇಲಿಯಾ ಆ ಬಳಿಕ ಝಿಂಬಾಬ್ವೆ ಹಾಗೂ ಶ್ರೀಲಂಕಾ ವಿರುದ್ಧ ಸೋಲನುಭವಿಸಿದೆ. ಇನ್ನು ಒಮಾನ್ ವಿರುದ್ಧ ಕೊನೆಯ ಪಂದ್ಯವಾಡಬೇಕಿದೆ. ಈ ಪಂದ್ಯಕ್ಕಾಗಿ ಸ್ಟೀವ್ ಸ್ಮಿತ್ ಆಸ್ಟ್ರೇಲಿಯಾ ತಂಡವನ್ನು ಕೂಡಿಕೊಂಡಿದ್ದಾರೆ.
T20 World Cup 2026: ಟಿ20 ವಿಶ್ವಕಪ್ಗೆ ಸ್ಟೀವ್ ಸ್ಮಿತ್ (Steve Smith) ಎಂಟ್ರಿ ಕೊಟ್ಟಿದ್ದಾರೆ. ಆದರೆ ಈ ಎಂಟ್ರಿಗೂ ಮುನ್ನವೇ ಆಸ್ಟ್ರೇಲಿಯಾ ತಂಡ ಟಿ20 ವಿಶ್ವಕಪ್ನಿಂದ ಹೊರಬಿದ್ದಿದೆ. ಈ ಬಾರಿಯ ವಿಶ್ವಕಪ್ ತಂಡದಲ್ಲಿ ಸ್ಟೀವ್ ಸ್ಮಿತ್ಗೆ ಸ್ಥಾನ ಲಭಿಸಿರಲಿಲ್ಲ. ಆದರೆ ಝಿಂಬಾಬ್ವೆ ವಿರುದ್ಧದ ಪಂದ್ಯದ ಬಳಿಕ ಮಿಚೆಲ್ ಮಾರ್ಷ್ ಗಾಯಗೊಂಡಿದ್ದ ಹಿನ್ನಲೆಯಲ್ಲಿ ಸ್ಮಿತ್ ಅವರನ್ನು ಮೀಸಲು ಆಟಗಾರರನಾಗಿ ಆಯ್ಕೆ ಮಾಡಲಾಗಿತ್ತು.











