ಬಂಟ್ವಾಳ : ಇಲ್ಲಿನ ನಗರ ಪೊಲೀಸ್ ಠಾಣಾ ಅ.ಕ್ರ : 24 /2020, ಕಲಂ: 143, 147, 148, 504, 323, 324, 506, 427 r/w 149 IPC & 2(a) Prevention of destruction and lose of Property Act ಪ್ರಕರಣದಲ್ಲಿ ಮಾನ್ಯ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೇ ಸುಮಾರು 06 ವರ್ಷಗಳಿಂದ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ವಾರೆಂಟ್ ಆಸಾಮಿ ಮಂಗಳೂರು ಬಜಾಲ್ ನಂತೂರು ನಿವಾಸಿ ಮಹಮ್ಮದ್ ನೌಫಲ್ ಯಾನೆ ಸಫಾರಿ ನೌಫಲ್ (34) ಎಂಬಾತ, ದಿನಾಂಕ 15/09/2026 ರಂದು ವಿದೇಶದಿಂದ ಮನೆಗೆ ಹಿಂತಿರುಗುತ್ತಿದ್ದಾಗ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಮಿಗ್ರೇಷನ್ ವಿಭಾಗದ ಸಹಾಯದಿಂದ ಬಂಟ್ವಾಳ ನಗರ ಪೊಲೀಸರು ದಸ್ತಗಿರಿ ಮಾಡಿರುತ್ತಾರೆ. ಆರೋಪಿಯನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿ ನ್ಯಾಯಾಲಯವು ದಿನಾಂಕ 29/09/2026 ವರೆಗೆ ನ್ಯಾಯಾಂಗ ಬಂಧನ ವಿಧಿಸಿರುತ್ತದೆ ಎಂದು ಪ್ರಕಟಣೆ ತಿಳಿಸಿದೆ.
ವಿದೇಶದಿಂದ ಹಿಂತಿರುಗುತ್ತಿದ್ದ ಸಫಾರಿ ನೌಫಲ್ ನೇರವಾಗಿ ಕಸ್ಟಡಿಗೆ!
Share this article
Subscribe
By pressing the Subscribe button, you confirm that you have read our Privacy Policy.













