ಪರವಾನಗಿ ರಹಿತ ಕೆಂಪು ಕಲ್ಲಿನ ಲಾರಿ ನೇರವಾಗಿ ಪೊಲೀಸ್‌ ಠಾಣೆಗೆ!

ವಿಟ್ಲ: ಸೂಕ್ತ ದಾಖಲೆ ಹಾಗೂ ಪರವಾನಗಿ ಇಲ್ಲದೆ ಅಕ್ರಮವಾಗಿ ಕೆಂಪು ಕಲ್ಲುಗಳನ್ನು ಸಾಗಿಸುತ್ತಿದ್ದ ಎರಡು ಲಾರಿಗಳನ್ನು ವಿಟ್ಲ ಠಾಣೆಯ ಪೊಲೀಸರು ವಶಕ್ಕೆ ಪಡೆದುಕೊಂಡು ನಾಲ್ವರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ವಿಟ್ಲ ಪೊಲೀಸ್ ಠಾಣೆಯ ಉಪನಿರೀಕ್ಷಕ ರಾಮಕೃಷ್ಣ ಅವರಿಗೆ ಸಿಕ್ಕಿದ ಖಚಿತ ಮಾಹಿತಿ ಆಧರಿಸಿ, ಸೆ. 14 ರಂದು ರಾತ್ರಿ ಬಂಟ್ವಾಳ ತಾಲೂಕಿನ ಕರೋಪಾಡಿ ಗ್ರಾಮದ ನೆಲ್ಲಿಕಟ್ಟೆ ಜಂಕ್ಷನ್ ಬಳಿ ಸಿಬ್ಬಂದಿಯೊಂದಿಗೆ ದಾಳಿ ನಡೆಸಿದ್ದಾರೆ. ಈ ವೇಳೆ ಕೇರಳ ಕಡೆಯಿಂದ ಕನ್ಯಾನ ಕಡೆಗೆ ಕೆಂಪು ಕಲ್ಲುಗಳನ್ನು ಹೊತ್ತು ಸಾಗುತ್ತಿದ್ದ KA 21 D 0784 ನಂಬರ್‌ನ ಲಾರಿಯನ್ನು ತಡೆದು ತಪಾಸಣೆ ನಡೆಸಿದಾಗ ಯಾವುದೇ ಪರವಾನಗಿ ಇಲ್ಲದಿರುವುದು ಕಂಡುಬಂದಿದೆ ಎಂದು ಪೊಲೀಸ್‌ ಮೂಲಗಳಿಂದ ತಿಳಿದುಬಂದಿದೆ.

Advertisement

ಘಟನೆಗೆ ಸಂಬಂಧಿಸಿದಂತೆ ಲಾರಿ ಚಾಲಕ, ವೀರಕಂಭ ನಿವಾಸಿ ಮಹಮ್ಮದ್ ತೌಕಿರ್, ಲಾರಿ ಮಾಲಕ ಮೊಹಮ್ಮದ್ ಸಿಮ್ರಾನ್ ಹಾಗೂ ಕೃತ್ಯಕ್ಕೆ ಸಹಕರಿಸಿದ ಸಜೀರ್ ವಿರುದ್ಧ ವಿಟ್ಲ ಠಾಣೆಯಲ್ಲಿ ಬಿಎನ್‌ಎಸ್‌ ಹಾಗೂ ಗಣಿ ಮತ್ತು ಭೂವಿಜ್ಞಾನ ಕಾಯ್ದೆಯಡಿ ಪ್ರಕರಣ ದಾಖಲಿಸಿ, ಲಾರಿಯನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ.

Advertisement
Advertisement

Share this article

Subscribe

By pressing the Subscribe button, you confirm that you have read our Privacy Policy.

Latest News

Advertisement

More News

You cannot copy content of this page