ಬಂಟ್ವಾಳ ಮಾಜಿ ಎ.ಪಿ.ಎಂ.ಸಿ ಅಧ್ಯಕ್ಷ ಸಂಕಪ್ಪ ಗೌಡ ಕೈಂತಿಲ ಇನ್ನಿಲ್ಲ

ಬಂಟ್ವಾಳ ತಾಲೂಕಿನ ಮಾಜಿ ಎ.ಪಿ.ಎಂ.ಸಿ ಅಧ್ಯಕ್ಷರಾಗಿದ್ದ ಸಂಕಪ್ಪ ಗೌಡ ಕೈಂತಿಲ (68) ಇಹಲೋಕ ತ್ಯಜಿಸಿದ್ದಾರೆ. ಇವರು ವಿಟ್ಲ ಗ್ರಾಮ ಪಂಚಾಯತಿಗೆ ಸತತವಾಗಿ 4 ಬಾರಿ ಸದಸ್ಯರಾಗಿ ಆಯ್ಕೆಯಾದ ಇವರು ವಿಟ್ಲ ಕ್ಷೇತ್ರದಿಂದ ಬಂಟ್ವಾಳ ಎಪಿಎಂಸಿ ಸಂಸ್ಥೆಗೆ ಚುನಾಯಿತರಾಗಿ ಒಂದು ಅವಧಿಗೆ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ರೈತಮೋರ್ಚಾ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದಾರೆ. ಶ್ರೀ ಉಮಾಮಹೇಶ್ವರ ಸೇವಾ ವಿಶ್ವಸ್ಥ ಮಂಡಳಿ ಮಾಮೇಶ್ವರ ಇದರ ಅಧ್ಯಕ್ಷರಾಗಿ, ಒಕ್ಕೆತ್ತೂರು ಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷರಾಗಿ, ವಿವಿಧ ಸಂಘಟನೆಗಳ ಮುಂದಾಳುವಾಗಿ ಸೇವೆ ಸಲ್ಲಿಸಿದ್ದಾರೆ.

Advertisement

ಪತ್ನಿ ಹಾಗೂ ನಾಲ್ವರು ಪುತ್ರರನ್ನು ಅಗಲಿದ್ದಾರೆ. ಇವರ ನಿಧನಕ್ಕೆ ವಿಟ್ಲ ಬಿಜೆಪಿ ಮಹಾಶಕ್ತಿಕೇಂದ್ರ ಸಮಿತಿ, ಶ್ರಿಉ ಉಮಾಮಹೇಶ್ವರ ಸೇವಾ ವಿಶ್ವಸ್ಥ ಮಂಡಳಿ ಸಂತಾಪ ವ್ಯಕ್ತಪಡಿಸಿದೆ.

Advertisement
Advertisement

Share this article

Subscribe

By pressing the Subscribe button, you confirm that you have read our Privacy Policy.

Latest News

Advertisement

More News

You cannot copy content of this page