ಪುತ್ತೂರಿನ ಕನ್ನಡ ಸಾಹಿತ್ಯ ಪರಿಷತ್ತು, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ, ಬೆಟ್ಟಂಪಾಡಿ ಗ್ರಾಮ ಪಂಚಾಯತ್, ಬೆಟ್ಟಂಪಾಡಿ ಸ.ಪ್ರ. ದರ್ಜೆ ಕಾಲೇಜಿನ ಕನ್ನಡ ಸಂಘದ ಸಹಕಾರದೊಂದಿಗೆ ಪುತ್ತೂರಿನ ಚಿಗುರೆಲೆ ಸಾಹಿತ್ಯ ಬಳಗದ ಸಂಯೋಜನೆಯಲ್ಲಿ ಹೊರನಾಡ ಕನ್ನಡಿಗ ಮಿತ್ರಂಪಾಡಿ ಜಯರಾಮ ರೈ ಮಹಾ ಪೋಷಕತ್ವದಲ್ಲಿ ಸಾಹಿತ್ಯದ ನಡಿಗೆ ಗ್ರಾಮದ ಕಡೆಗೆ ಅಭಿಯಾನದಂಗವಾಗಿ ʼಗ್ರಾಮ ಸಾಹಿತ್ಯ ಸಂಭ್ರಮʼ ಸರಣಿ 21 ಕಾರ್ಯಕ್ರಮವು ಸೆಪ್ಟೆಂಬರ್ 19 ಶನಿವಾರದಂದು ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 01ರವರೆಗೆ ಬೆಟ್ಟಂಪಾಡಿಯ ಸ.ಪ್ರ.ದರ್ಜೆ ಕಾಲೇಜಿನ ಆವರಣದಲ್ಲಿ ನಡೆಯಲಿದೆ.
ಯುವ ಜನತೆಯನ್ನು ಸಾಹಿತ್ಯ ಲೋಕದತ್ತ ಬರಮಾಡಿಕೊಳ್ಳುವ ಹಾಗೂ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಮಕ್ಕಳ ಸಾಹಿತ್ಯ ಸಮ್ಮೇಳನ ಸ್ವರೂಪದ ‘ಗ್ರಾಮ ಗ್ರಾಮದಲ್ಲೂ ಸಾಹಿತ್ಯ ಸಂಭ್ರಮ, ಎಂಬ ವಿನುತನ ಕಾರ್ಯಕ್ರಮವನ್ನು ಕಳೆದ ನಾಲ್ಕುವರೆ ವರ್ಷಗಳಿಂದ ಹಮ್ಮಿಕೊಳ್ಳಲಾಗಿದ್ದು.. ಸಾಹಿತ್ಯದ ನಡಿಗೆ ಗ್ರಾಮದ ಕಡೆಗೆ ಎಂಬ ಘೋಷ ವಾಕ್ಯದಲ್ಲಿ ನಡೆಸುವ ಈ ಗ್ರಾಮ ಸಾಹಿತ್ಯ ಸಂಭ್ರಮ ಸರಣಿ-೨೧ ಈ ಕಾರ್ಯಕ್ರಮವು ನಡೆಯಲಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತು ಪುತ್ತೂರು ತಾಲೂಕು ಘಟಕ ಅಧ್ಯಕ್ಷ ಪುತ್ತೂರು ಉಮೇಶ್ ನಾಯಕ್ ಹಾಗೂ ಕ.ಸಾ.ಪ ಪುತ್ತೂರಿನ ಗ್ರಾಮ ಸಾಹಿತ್ಯ ಸಂಭ್ರಮದ ಸಂಚಾಲಕ ನಾರಾಯಣ ಕುಂಬ್ರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.














