ಶಶಿಕುಮಾರ್‌ ರೈ ಬಾಲ್ಯೊಟ್ಟುರವರಿಗೆ ಹುಟ್ಟೂರ ಅಭಿನಂದನಾ ಸಮಾರಂಭ ; ಸೆ.20 ರಂದು ನಡೆಯಲಿದೆ ಅದ್ಧೂರಿ ಕಾರ್ಯಕ್ರಮ

ಬೆಟ್ಟಂಪಾಡಿ: ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಬೆಂಗಳೂರು ಇದರ ಆಡಳಿತ ಮಂಡಳಿಗೆ ಮೈಸೂರು ವಿಭಾಗದಿಂದ ನೂತನ ನಿರ್ದೇಶಕರಾಗಿ ಆಯ್ಕೆಯಾಗಿರುವ ಸಹಕಾರಿ ಧುರೀಣ, ದ.ಕ.ಜಿಲ್ಲಾ ಸಹಕಾರಿ ಯೂನಿಯನ್‌ ಅಧ್ಯಕ್ಷ, ಎಸ್‌ಸಿಡಿಸಿಸಿ ಬ್ಯಾಂಕ್‌ ಇದರ ನಿರ್ದೇಶಕ ಮತ್ತು ಇರ್ದೆ- ಬೆಟ್ಟಂಪಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಶಶಿಕುಮಾರ್‌ ರೈ ಬಾಲ್ಯೊಟ್ಟುರವರಿಗೆ ಹುಟ್ಟೂರ ಅಭಿನಂದನಾ ಸಮಾರಂಭವು ಸೆ, 20 ರಂದು ಇರ್ದೆ ಬೆಟ್ಟಂಪಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆವರಣದಲ್ಲಿ ನಡೆಯಲಿದೆ.

Advertisement

ಶ್ರೀರಾಮನಗರ ಶ್ರೀ ಅಯ್ಯಪ್ಪ ಭಜನಾ ಮಂದಿರದ ವಠಾರದಿಂದ ತೆರೆದ ಜೀಪಿನಲ್ಲಿ ಮೆರವಣಿಗೆ ಮೂಲಕ ಶಶಿಕುಮಾರ್‌ ರೈ ಅವರಿಗೆ ಸ್ವಾಗತ ನಡೆದು ಬಳಿಕ ನಡೆಯಲಿರುವ ಅಭಿನಂದನಾ ಸಮಾರಂಭದ ಅದ್ಯಕ್ಷತೆಯನ್ನು ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಸಕ ಅಶೋಕ್‌ ಕುಮಾರ್‌ ರೈ ವಹಿಸಲಿದ್ದಾರೆ. ದ.ಕ. ಲೋಕಸಭಾ ಕ್ಷೇತ್ರದ ಸಂಸದ ಕ್ಯಾ. ಬ್ರಿಜೇಶ್‌ ಚೌಟ ದೀಪ ಪ್ರಜ್ವಲನೆ ಮಾಡಲಿದ್ದಾರೆ. ಮಾಜಿ ಸಂಸದ ನಳಿನ್‌ ಕುಮಾರ್‌ ಕಟೀಲ್‌ ಅಭಿನಂದನಾ ಮಾತುಗಳನ್ನಾಡಲಿದ್ದಾರೆ. ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ ಪೂಜಾರಿ ಅಭಿನಂದಿಸಲಿದ್ದಾರೆ.
ವಿಶೇಷ ಅಭ್ಯಾಗತರಾಗಿ ಕರ್ನಾಟಕ ವಿಧಾನಪರಿಷತ್‌ ಸದಸ್ಯ ಕಿಶೋರ್‌ ಕುಮಾರ್‌ ಬೊಟ್ಯಾಡಿ, ಕ್ಯಾಂಪ್ಕೋ ಅಧ್ಯಕ್ಷ ಎಸ್.‌ ಆರ್.‌ ಸತೀಶ್ಚಂದ್ರ, ಪುತ್ತೂರಿನ ಮಾಜಿ ಶಾಸಕ ಸಂಜೀವ ಮಠಂದೂರು, ಎಸ್‌ಸಿಡಿಸಿಸಿ ಬ್ಯಾಂಕ್‌ ನಿರ್ದೇಶಕ ಎಸ್.ಬಿ. ಜಯರಾಮ ರೈ, ಬೆಂಗಳೂರು ಚುನಾವಣಾ ಪ್ರಾಧಿಕಾರದ ಜಂಟಿ ನಿಂಭದಕ ಬಿ.ಕೆ. ಸಲೀಂ, ಕಾವು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ನನ್ಯ ಅಚ್ಚುತ ಮೂಡೆತ್ತಾಯ, ಶ್ರೀಕ್ಷೇತ್ರ ಧ.ಗ್ರಾ. ಯೋಜನೆಯ ಜಿಲ್ಲಾ ನಿರ್ದೇಶಕ ಬಾಬು ನಾಯ್ಕ ಭಾಗವಹಿಸಲಿದ್ದಾರೆ.

Advertisement
Advertisement

Share this article

Subscribe

By pressing the Subscribe button, you confirm that you have read our Privacy Policy.

Latest News

Advertisement

More News

You cannot copy content of this page