ದಕ್ಷಿಣ ಕನ್ನಡ : ಕರಾವಳಿಯ ಮೂರು ಜಿಲ್ಲೆಗಳಲ್ಲಿ ಇನ್ನು ಮೂರು ದಿನಗಳ ಕಾಲ ಭಾರಿ ಮಳೆ ಹಾಗೂ ಬಿರುಗಾಳಿ ಸಹಿತ ವರುಣನ ಆರ್ಭಟ ಮುಂದುವರಿಯಲಿದೆ ಎಂದು ಬೆಂಗಳೂರಿನ ಭಾರತೀಯ ಹವಾಮಾನ ಇಲಾಖೆ ಈಗಾಗಲೇ ಮುನ್ನೆಚ್ಚರಿಕೆ ನೀಡಿದೆ.
ಹವಾಮಾನ ವರದಿಯ ಪ್ರಕಾರ, ಜಿಲ್ಲೆಯ ಹಲವೆಡೆ ಗಂಟೆಗೆ 30 ರಿಂದ 40 ಕಿ.ಮೀ ವೇಗದಲ್ಲಿ ಬಿರುಗಾಳಿ ಬೀಸಲಿದ್ದು, ಮೋಡಕವಿದ ವಾತಾವರಣದೊಂದಿಗೆ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಕಳೆದ ರಾತ್ರಿಯಿಂದ ಹಾಗೂ ಸೋಮವಾರ ಬೆಳಗಿನ ಜಾವದಿಂದ ಉಡುಪಿ ಜಿಲ್ಲೆಯ ವಿವಿಧ ಭಾಗಗಳಲ್ಲಿ ವರುಣನ ಕೃಪೆಯಾಗಿದೆ.
ಇನ್ನು ಕಳೆದ 24 ಗಂಟೆಗಳ ಅವಧಿಯಲ್ಲಿ ಉಡುಪಿ ಜಿಲ್ಲೆಯಲ್ಲಿ ಸರಾಸರಿ 4.2 ಮಿ.ಮೀ ಮಳೆ ದಾಖಲಾಗಿದೆ.
ಕರಾವಳಿ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ ಇರುವುದರಿಂದ ಸಾರ್ವಜನಿಕರು ಹಾಗೂ ಮೀನುಗಾರರು ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.













