ಪುತ್ತೂರು: ಹಿಂದೂ ಜಾಗರಣಾ ವೇದಿಕೆಯ ಕಾರ್ಯಕರ್ತ ಕಾರ್ತಿಕ್ ಮೇರ್ಲ ಕೊಲೆ ಪ್ರಕರಣದ ಆರೋಪಿಗಳಾದ ಉಳ್ಳಾಲ ಮೂಲದ ಪ್ರೀತೇಶ್ ಹಾಗೂ ಪುತ್ತೂರಿನ ಕಿರಣ್ ಅವರಿಗೆ ಜೀವಾವಧಿ ಶಿಕ್ಷೆ ಪ್ರಕಟಗೊಂಡಿದೆ.
ಪ್ರಕರಣದ ವಿಚಾರಣೆ ನಡೆಸಿದ ಪುತ್ತೂರಿನ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಇಬ್ಬರು ಆರೋಪಿಗಳ ಮೇಲಿನ ಆರೋಪ ಸಾಬೀತಾಗಿದೆ ಎಂದು ತೀರ್ಪು ನೀಡಿದ್ದು ಇದೀಗ ಜೀವಾವಧಿ ಶಿಕ್ಷೆ ಪ್ರಕಟಗೊಂಡಿದೆ.
ಜೊತೆಗೆ ತಲಾ 3 ಲಕ್ಷ ರುಪಾಯಿ ದಂಡ ಮತ್ತು ದಂಡದ ಮೊತ್ತದಲ್ಲಿ ರೂ. 5 ಲಕ್ಷದ 90 ಸಾವಿರ ಮೊತ್ತವನ್ನು ಕಾರ್ತಿಕ್ ಮೇರ್ಲ ಅವರ ತಾಯಿಗೆ ನೀಡಲು ನ್ಯಾಯಾಲಯ ಸೂಚಿಸಿದೆ.
ಪ್ರಕರಣದಲ್ಲಿ ಸರಕಾರಿ ವಕೀಲರಾದ ಜಯಂತಿ ಅವರು ಸರಕಾರದ ಪರವಾಗಿ ವಾದ ಮಂಡಿಸಿದ್ದರು.













