ಮಂಗಳೂರಿನಲ್ಲಿ ಅಕ್ರಮ ಜಾನುವಾರ ಸಾಗಾಟ; 17 ಜಾನುವಾರುಗಳ ರಕ್ಷಣೆ

ಮಂಗಳೂರು : ಕಂಕನಾಡಿ ನಗರ ಪೊಲೀಸ್ ಠಾಣೆಯ ಪಿ.ಎಸ್.ಐ ರವರು ಠಾಣೆಯ ಸಿಬ್ಬಂದಿ ಸಿದ್ದರಾಮ ಅವರೊಂದಿಗೆ ಸೆ.22ರಂದು ಇಲಾಖಾ ವಾಹನದಲ್ಲಿ ಬೆಳಗಿನ ಜಾವ ಮಾರ್ನಿಂಗ್ ರೌಂಡ್ಸ್ ಕರ್ತವ್ಯದಲ್ಲಿದ್ದ ಸಂದರ್ಭದಲ್ಲಿ, ಈಚರ್ ಕಂಪೆನಿಯ ಲಾರಿಯಲ್ಲಿ ಜಾನುವಾರುಗಳನ್ನು ಹಿಂಸಾತ್ಮಕವಾಗಿ ಕಟ್ಟಿ ಅಕ್ರಮವಾಗಿ ಸಾಗಾಟ ಮಾಡುತ್ತಿರುವ ಬಗ್ಗೆ ಮಾಹಿತಿ ಲಭಿಸಿದ ಮೇರೆಗೆ ಪೊಲೀಸರು ವಾಹನಕ್ಕಾಗಿ ಕಾಯುತ್ತಿದ್ದಾಗ, ಸುಮಾರು ಬೆಳಿಗ್ಗೆ 06:30 ಗಂಟೆಗೆ ಆಡ್ಯಾರು ಕಡೆಯಿಂದ ಮಂಗಳೂರು ನಗರದ ಕಡೆಗೆ ಬರುತ್ತಿದ್ದ ಕಂದು ಬಣ್ಣದ ಈಚರ್ ಲಾರಿಯೊಂದು ಕಂಡುಬಂದಿದ್ದು, ಸದರಿ ಲಾರಿಯನ್ನು ಬೆನ್ನಟ್ಟಿ ಪಡೀಲ್ ಟೊಯೋಟಾ ಕಾರ್ ಶೋರೂಮ್ ಎದುರು ತಡೆದು ನಿಲ್ಲಿಸಿದರು. ಈ ಸಂದರ್ಭದಲ್ಲಿ ಚಾಲಕ ಲಾರಿಯಲ್ಲಿಯೇ ಇದ್ದು, ಲಾರಿಯಲ್ಲಿದ್ದ ಒರ್ವ ವ್ಯಕ್ತಿ ವಾಹನದಿಂದ ಇಳಿದು ಪರಾರಿಯಾಗಿರುತ್ತಾನೆ.

Advertisement

ಲಾರಿಯನ್ನು ಪರಿಶೀಲಿಸಿ ಚಾಲಕ ಹಾಸನದ ಸಾಧೀಕ್ ಜಿ (23) ವರ್ಷ ಎಂಬಾತನನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.

Advertisement
Advertisement

ಲಾರಿಯ ಬಾಡಿಯನ್ನು ಹಸಿರು ಬಣ್ಣದ ಟಾರ್ಪಲ್‌ನಿಂದ ಮುಚ್ಚಲಾಗಿದ್ದು, ಪರಿಶೀಲನೆಯ ವೇಳೆ ಲಾರಿಯಲ್ಲಿ ಒಟ್ಟು 17 ಜಾನುವಾರುಗಳು ಪತ್ತೆಯಾಗಿವೆ. ಸದರಿ ಜಾನುವಾರುಗಳನ್ನು ಯಾವುದೇ ಸುರಕ್ಷತಾ ಕ್ರಮಗಳನ್ನು ಪಾಲಿಸದೆ, ಹಿಂಸಾತ್ಮಕ ರೀತಿಯಲ್ಲಿ ಒಂದರ ಮೇಲೊಂದು ಬಿಗಿಯಾಗಿ ಹಗ್ಗಗಳಿಂದ ಲಾರಿಯ ಬಾಡಿಯ ಕಬ್ಬಿಣದ ಕ್ಯಾರೇಜ್ಗಳಿಗೆ ಕಟ್ಟಿ, ಕತ್ತುಗಳನ್ನು ಮೇಲಕ್ಕೆ ಎತ್ತಿ, ಉಸಿರಾಟಕ್ಕೂ ತೊಂದರೆಯಾಗುವ ರೀತಿಯಲ್ಲಿ ಸಾಗಾಟ ಮಾಡುತ್ತಿರುವುದು ಕಂಡುಬಂದಿದ್ದು, ಈ ಬಗ್ಗೆ ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ಠಾಣಾ ಅ.ಕ್ರ : U/S 11(A),11(D)) Prevention of Cruelty to Animals Act U/S 6, The Karnataka Prevention of Slaughter and Preservation of Cattle Act U/S 3(5) BNS ರಂತೆ ಪ್ರಕರಣ ದಾಖಲಾಗಿದೆ.

ಈ ಹಿನ್ನೆಲೆಯಲ್ಲಿ 17 ಜಾನುವಾರುಗಳು, ಲಾರಿ ಹಾಗೂ ಆರೋಪಿ ಸಾದಿಕ್‌ನ ಮೊಬೈಲ್ ಫೋನ್ ಸೇರಿದಂತೆ ಸಂಬಂಧಿತ ಸೊತ್ತುಗಳನ್ನು ವಶಕ್ಕೆ ಪಡೆದುಕೊಂಡು, ಆರೋಪಿತ ಸಾದಿಕ್‌ನನ್ನು ವಶಕ್ಕೆ ಪಡೆಯಲಾಗಿದೆ.

ಈ ಪ್ರಕರಣದಲ್ಲಿ ಪರಾರಿಯಾಗಿರುವ ಆರೋಪಿಗಳಾದ ಸುಬಾನ್ ಮತ್ತು ರೆಹಮಾನ್ ರವರ ಪತ್ತೆಗೆ ಕ್ರಮಗಳನ್ನು ಕೈಗೊಳ್ಳಲಾಗುತ್ತಿದ್ದು ಪ್ರಕರಣದ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದೆ ಎಂದು ಮಂಗಳೂರು ನಗರದ ಪೊಲೀಸ್‌ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share this article

Subscribe

By pressing the Subscribe button, you confirm that you have read our Privacy Policy.

Latest News

Advertisement

More News

You cannot copy content of this page