ಸೆ. 28ಕ್ಕೆ ಬಿಸಿರೋಡಿನಲ್ಲಿ ವಿಶ್ವ ಹಿಂದೂ ಪರಿಷತ್‌ ಬೃಹತ್‌ ಪ್ರತಿಭಟನೆ!

ಬಂಟ್ವಾಳ: ಕೊಳತ್ತಮಜಲು ಅಬ್ದುಲ್ ರಹಮಾನ್ ಕೊಲೆ ಪ್ರಕರಣದ ಆರೋಪಿಗಳಾದ ಭರತ್ ಕುಮ್ಡೇಲು (38), ಶಿವಪ್ರಸಾದ್ (33), ಪ್ರದೀಪ್ (34), ಅಭಿನವ್ ರೈ (32), ತೇಜಾಕ್ಷ (24) ಹಾಗೂ ರಂಜಿತ್ (35) ವಿರುದ್ಧ ಪೊಲೀಸರು ಗೂಂಡಾ ಕಾಯ್ದೆ ಜಾರಿಗೊಳಿಸಿರುವುದನ್ನು ಖಂಡಿಸಿ ಸೆಪ್ಟೆಂಬರ್ 28ರಂದು ಬಿಸಿರೋಡಿನಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.
ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಿಎಚ್‌ಪಿ ಮುಖಂಡ ಪ್ರಸಾದ್ ಕುಮಾರ್ ರೈ, ಮೈಸೂರಿನ ವಿಶೇಷ ನ್ಯಾಯಾಲಯದಿಂದ ಆರೋಪಿಗಳಿಗೆ ಜಾಮೀನು ಮಂಜೂರಾದ ಬೆನ್ನಲ್ಲೇ, ಜೈಲಿನಿಂದ ಬಿಡುಗಡೆಯಾಗದಂತೆ ಗೂಂಡಾ ಕಾಯ್ದೆ ಹೇರಿರುವುದು ಸರ್ಕಾರದ ದಮನ ನೀತಿಯಾಗಿದೆ. ಹಿಂದೂ ಕಾರ್ಯಕರ್ತರ ಮೇಲಿನ ದೌರ್ಜನ್ಯ ಖಂಡಿಸಿ ನಡೆಯುವ ಈ ಹೋರಾಟದಲ್ಲಿ ಸಾರ್ವಜನಿಕರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

Advertisement

ಸುದ್ದಿಗೋಷ್ಠಿಯಲ್ಲಿ ಭುಜಂಗ ಕುಲಾಲ್, ಲೋಹಿತ್ ಪಣೋಲಿಬೈಲ್, ಸಂತೋಷ್ ಸರಪಾಡಿ ಮತ್ತು ಸಚಿನ್ ಮೇಲ್ಕಾರ್ ಉಪಸ್ಥಿತರಿದ್ದರು.

Advertisement
Advertisement

Share this article

Subscribe

By pressing the Subscribe button, you confirm that you have read our Privacy Policy.

Latest News

Advertisement

More News

You cannot copy content of this page