ಇಂಡಿ ಕ್ಷೇತ್ರದ ಶಾಸಕ ಯಶವಂತರಾಯಗೌಡ ಪಾಟೀಲ್ ರಾಜಿನಾಮೆ ; ಸೌಮ್ಯ ಸ್ವಭಾವದವರಿಗೆ ಸರ್ಕಾರದಲ್ಲಿ ಮನ್ನಣೆಯಿಲ್ಲ!!

ವಿಜಯಪುರ: ಇಂಡಿ ತಾಲೂಕನ್ನು ಬರಪೀಡಿತ ಪ್ರದೇಶವೆಂದು ಘೋಷಿಸದಿರುವುದಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಇಂಡಿ ಕ್ಷೇತ್ರದ ಶಾಸಕ ಯಶವಂತರಾಯಗೌಡ ಪಾಟೀಲ್, ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಇಂಡಿ ತಾಲೂಕನ್ನು ಬರಪೀಡಿತ ಪ್ರದೇಶವೆಂದು ಘೋಷಿಸುವಂತೆ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಗೆ ಮನವಿ ಮಾಡಿದ್ದರೂ ಸೂಕ್ತ ಸ್ಪಂದನೆ ಸಿಕ್ಕಿಲ್ಲ ಎಂದು ಯಶವಂತರಾಯಗೌಡ ಪಾಟೀಲ್ ಅಸಮಾಧಾನ ಹೊರಹಾಕಿದ್ದಾರೆ.

Advertisement

ಸೌಮ್ಯ ಸ್ವಭಾವದ ನನ್ನಂಥವರಿಗೆ ಈ ಸರ್ಕಾರದಲ್ಲಿ ಮನ್ನಣೆ ಇಲ್ಲ. ಬಲಾಢ್ಯರಿಗಷ್ಟೇ ಮನ್ನಣೆ ನೀಡಲಾಗುತ್ತಿದೆ. ಇದರಿಂದ ನನ್ನ ಕ್ಷೇತ್ರದ ಜನರಿಗೆ ನ್ಯಾಯ ಒದಗಿಸಲು ಸಾಧ್ಯವಾಗುತ್ತಿಲ್ಲ ಎಂದು ಯಶವಂತರಾಯಗೌಡ ಪಾಟೀಲ್ ಬೇಸರ ವ್ಯಕ್ತಪಡಿಸಿದ್ದಾರೆ.
ಕ್ಷೇತ್ರದ ಜನರು ಬರದಿಂದ ಸಂಕಷ್ಟ ಎದುರಿಸುತ್ತಿರುವ ಸಂದರ್ಭದಲ್ಲಿ ಇಂಡಿ ತಾಲೂಕನ್ನು ಬರಪೀಡಿತ ಪ್ರದೇಶವೆಂದು ಘೋಷಿಸುವಂತೆ ಸರ್ಕಾರದ ಗಮನ ಸೆಳೆದಿದ್ದರೂ ಪ್ರಯೋಜನವಾಗಿಲ್ಲ ಎಂಬುದು ಶಾಸಕರ ಅಸಮಾಧಾನಕ್ಕೆ ಕಾರಣವಾಗಿದೆ.

Advertisement
Advertisement

ಹೀಗಾಗಿ ಕ್ಷೇತ್ರದ ಜನರಿಗೆ ನ್ಯಾಯ ಒದಗಿಸಲು ಸಾಧ್ಯವಾಗದಿರುವುದರಿಂದ ಶಾಸಕ ಸ್ಥಾನದಲ್ಲಿ ಮುಂದುವರಿಯುವುದು ಸೂಕ್ತವಲ್ಲ ಎಂಬ ನಿರ್ಧಾರಕ್ಕೆ ಬಂದಿರುವ ಯಶವಂತರಾಯಗೌಡ ಪಾಟೀಲ್, ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂದು ಶಾಸಕರ ಮೂಲಗಳು ತಿಳಿಸಿವೆ.

Share this article

Subscribe

By pressing the Subscribe button, you confirm that you have read our Privacy Policy.

Latest News

Advertisement

More News

You cannot copy content of this page