ಬಂಟ್ವಾಳ: ಕೊಳತ್ತಮಜಲು ಅಬ್ದುಲ್ ರಹಮಾನ್ ಕೊಲೆ ಪ್ರಕರಣದ ಆರೋಪಿಗಳಾದ ಭರತ್ ಕುಮ್ಡೇಲು (38), ಶಿವಪ್ರಸಾದ್ (33), ಪ್ರದೀಪ್ (34), ಅಭಿನವ್ ರೈ (32), ತೇಜಾಕ್ಷ (24) ಹಾಗೂ ರಂಜಿತ್ (35) ವಿರುದ್ಧ ಪೊಲೀಸರು ಗೂಂಡಾ ಕಾಯ್ದೆ ಜಾರಿಗೊಳಿಸಿರುವುದನ್ನು ಖಂಡಿಸಿ ಸೆಪ್ಟೆಂಬರ್ 28ರಂದು ಬಿಸಿರೋಡಿನಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.
ಈ ಬೃಹತ್ ಪ್ರತಿಭಟನೆಗೆ ಇನ್ನಷ್ಟು ಬಲ ತುಂಬಲು ಮಾಜಿ ಸಂಸದ ಪ್ರತಾಪ್ ಸಿಂಹ ಸೆ. 28ಕ್ಕೆ ಬಿ.ಸಿ.ರೋಡಿಗೆ ಪ್ರಮುಖ ಭಾಷಣಗಾರರಾಗಿ ಆಗಮಿಸಲಿದ್ದಾರೆ ಎಂದು ಮೂಲಗಳಿಂದ ಮಾಹಿತಿ ದೊರೆತಿದೆ.
ಒಟ್ಟಿನಲ್ಲಿ ಈ ಪ್ರಕರಣವು ದಿನಕ್ಕೊಂದು ತಿರುವು ಪಡೆಯುತ್ತಿದ್ದು, ಮತ್ತೆ ಕರಾವಳಿ ಉದ್ದಿಗ್ನಗೊಳ್ಳಿದೆಯೇ ಎಂಬುದನ್ನು ಕಾದನೋಡಬೇಕಾಗಿದೆ.













