ಬಂಟ್ವಾಳ: ಮಾಣಿ ಫ್ಲೈ ಓವರ್ ರಸ್ತೆಯಲ್ಲಿ ಆಲ್ಟೋ ಕಾರು ಹಾಗೂ ಟೆಂಪೋ ಪಿಕಪ್ ವಾಹನದ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಓರ್ವ ಮಹಿಳೆ ಮೃತಪಟ್ಟಿದ್ದು, ಮೂವರು ಮಹಿಳೆಯರು ಗಂಭೀರವಾಗಿ ಗಾಯಗೊಂಡ ಘಟನೆ ಸೋಮವಾರ ಬೆಳಗ್ಗೆ ಸುಮಾರು 6 ಗಂಟೆಗೆ ನಡೆದಿದೆ.
ಮಡಿಕೇರಿ ನಿವಾಸಿ ನಫೀಸಾ (55) ಮೃತಪಟ್ಟ ಮಹಿಳೆ ಎಂದು ತಿಳಿದುಬಂದಿದೆ. ಆಲ್ಟೋ ಕಾರಿನಲ್ಲಿ ಚಾಲಕ ಸೇರಿದಂತೆ ಐವರು ಪ್ರಯಾಣಿಸುತ್ತಿದ್ದು, ನಾಲ್ವರು ಮಹಿಳೆಯರು ಹಾಗೂ ಚಾಲಕ ಇದ್ದರು. ಉಮ್ರಾ ತರಗತಿ ಮುಗಿಸಿ ಮನೆಗೆ ಹಿಂದಿರುಗುತ್ತಿದ್ದ ವೇಳೇ ಈ ಘಟನೆ ನಡೆದಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.













