ದರ್ಶನ್‌ಗೆ ಶಾಕ್‌ ಮೇಲೆ ಶಾಕ್!‌ ಚಾಲೆಂಜಿಂಗ್‌ ಸ್ಟಾರ್‌ ಅರ್ಜಿ ತಿರಸ್ಕರಿಸಿದ ಕೋರ್ಟ್‌!!

ರೇಣುಕಾಸ್ವಾಮಿ ಕೊಲೆ ಕೇಸ್‌ ವಿಚಾರಣೆ ನಡೆಯುತ್ತಿರುವ ಸಂದರ್ಭದಲ್ಲೇ ಆರೋಪಿ ದರ್ಶನ್‌ ಹೈಕೋರ್ಟ್‌ ಮೊರೆಹೋಗಿದ್ದಾರೆ. ಇಂದು ಕೇಸ್‌ಗೆ ಸಂಬಂಧಿಸಿದ ಇನ್ನೋರ್ವ ಆರೋಪಿ ಪ್ರದೋಷ್ ಮಾಫಿ ಸಾಕ್ಷಿ ಹೇಳಿಕೆ ದಾಖಲು ಪ್ರಕ್ರಿಯೆ 12 ಗಂಟೆಗೆ ನಿಗದಿಯಾಗಿತ್ತು. ಪ್ರದೋಷ್ ಕೋರ್ಟ್​ಗೆ ಬರುವ ವೇಳೆ, ಕೋರ್ಟ್ ಬಳಿ ಬಿಗಿ ಬಂದೋಬಸ್ತ್ ಕೂಡಾ ಮಾಡಲಾಯಿತು. ಅದೇ ವೇಳೆ ದರ್ಶನ್‌ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.

Advertisement

59ನೇ ಸಿಸಿಹೆಚ್ ಕೋರ್ಟ್ ನಲ್ಲಿ ವಿಚಾರಣೆ ಆರಂಭವಾಗಿ ಆರೋಪಿಗಳ ಹಾಜರಾತಿ ಪಡೆದ ನ್ಯಾಯಾಧೀಶರು ಈ ವೇಳೆ ಕೆಲ ಆರೋಪಿಗಳು ಗೈರಾಗಿದ್ದರು. ಅಧಿಕಾರಿಗಳು ಪ್ರದೋಷ್‌ನ ಕೋರ್ಟ್‌ಗೆ ಹಾಜರುಪಡಿಸಿದ್ದು, ಈ ಸಂದರ್ಭದಲ್ಲಿ ದರ್ಶನ್ ಲಾಯರ್ ಹೈಕೋರ್ಟ್ ನಲ್ಲಿ ಅರ್ಜಿ ಹಾಕಿದ ಬಗ್ಗೆ ಕೋರ್ಟ್ ಗೆ ಮಾಹಿತಿ ನೀಡಿದ್ದಾರೆ. ಸಿಸಿಹೆಚ್ ಕೋರ್ಟ್ ಗೆ ಮಾಹಿತಿ ನೀಡಿದ ದರ್ಶನ್ ಪರ ವಕೀಲರು ಅರ್ಜಿ ಸಲ್ಲಿಸಿರುವುದಾಗಿ ತಿಳಿಸಿದ್ದಾರೆ. ನಂತರ ಪ್ರದೂಶ್ ಹೇಳಿಕೆ ಮುಂದೂಡುವಂತೆ ಮನವಿ ಮಾಡಿಕೊಂಡಿದ್ದಾರೆ.

Advertisement
Advertisement

ದರ್ಶನ್ ಪರ ವಕೀಲರ ಮನವಿಗೆ ಎಸ್‌ಪಿಪಿ ಪ್ರಸನ್ನಕುಮಾರ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಕೋರ್ಟ್ ಅವರ ಮನವಿಯನ್ನು ಶನಿವಾರವೇ ತಿರಸ್ಕಾರ ಮಾಡಿದೆ. ಆರೋಪಿಗಳ ಪರ ವಕೀಲರೂ ತ್ವರಿತ ವಿಚಾರಣೆಗೆ ಸಹಕರಿಸಬೇಕು. ಸುಪ್ರೀಂಕೋರ್ಟ್ ಈ ಬಗ್ಗೆ ಸ್ಪಷ್ಟವಾಗಿ ತಿಳಿಸಿದೆ ಎಂದು ಹೇಳಿದ್ದಾರೆ.
ತಕ್ಷಣವೇ ವಿಚಾರಣೆ ನಡೆಸುವಂತೆ ಸುಪ್ರೀಂ ಕೋರ್ಟ್ ಆದೇಶ ಮಾಡಿದೆ ಎಂದು ಪ್ರಾಸಿಕ್ಯೂಷನ್ ಸುಪ್ರೀಂ ಕೋರ್ಟ್ ಆದೇಶವನ್ನು ಸಿಟಿ ಸಿವಿಲ್ ಕೋರ್ಟ್ ಗೆ ಸಲ್ಲಿಸಿದ್ದಾರೆ. 2025ರ ಮೇ 15ರ ಸುಪ್ರೀಂ ಕೋರ್ಟ್ ಆದೇಶವನ್ನ ಕೋರ್ಟ್ ಗೆ ನೀಡಿದ ಸಿಟಿ ಸಿವಿಲ್ ಕೋರ್ಟ್ ದರ್ಶನ್ ಮೆಮೋ ರದ್ದುಗೊಳಿಸಿದೆ. ಎರಡು ದಿನ ವಿಚಾರಣೆ ಮುಂದೆಹಾಕುವಂತೆ ದರ್ಶನ್ ಪರ ವಕೀಲರು ಅರ್ಜಿ ಸಲ್ಲಿಸಿದ್ದರು. ಸಿಟಿ ಸಿವಿಲ್ ಕೋರ್ಟ್ ಗೆ ಅರ್ಜಿ ರದ್ದುಗೊಳಿಸಿದ್ದು, ಅರ್ಜಿ ಪುರಸ್ಕರಿಸದಂತೆ ಎಸ್ಪಿಪಿ ಪ್ರಸನ್ನ ಕುಮಾರ್ ವಾದ ಮಾಡಿದ್ದರು. ದರ್ಶನ್ ಅರ್ಜಿ ರದ್ದು ಮಾಡಿ ವಿಚಾರಣೆಯನ್ನು ಮುಂದೂಡಲಾಗಿದೆ.
ಇತ್ತ ಹೈಕೋರ್ಟ್‌ನಲ್ಲಿ ಸಲ್ಲಿಸಿದ್ದ ಅರ್ಜಿಯೂ ರದ್ದಾಗಿದೆ. ಮೂರು ದಿನಗಳ ಕಾಲ ಪ್ರದೂಶ್ ಹೇಳಿಕೆ ಪ್ರಕ್ರಿಯೆ ಮುಂದೂಡುವಂತೆ ಅರ್ಜಿ ಹಾಕಿದ್ದ ದರ್ಶನ್ ರದ್ದಾಗಿದೆ. ತಕ್ಷಣ ವಿಚಾರಣೆ ಮಾಡುವಂತೆ ಹೈಕೋರ್ಟ್‌ಗೆ ಮನವಿ ಮಾಡಲಾಗಿತ್ತು, ಆದರೆ ದರ್ಶನ್ ಮನವಿ ತಿರಸ್ಕರಿಸಿ ಹೈಕೋರ್ಟ್‌ನಲ್ಲಿಯೂ ಅರ್ಜಿ ರದ್ದು ಮಾಡಲಾಗಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ.

Share this article

Subscribe

By pressing the Subscribe button, you confirm that you have read our Privacy Policy.

Latest News

Advertisement

More News

You cannot copy content of this page