ಬೆಂಗಳೂರು, ಸೆ. 29: ಮಹಿಳೆಯರ ಗೃಹಲಕ್ಷ್ಮೀ ಯೋಜನೆಯಡಿ ಬ್ಯಾಂಕ್ ಖಾತೆಗೆ ಜಮೆಯಾಗುವ ತಿಂಗಳ 2000 ರೂ. ಅನ್ನು ಯಾವುದೇ ಕಾರಣಕ್ಕೂ ಸಾಲದ ಕಂತು ಅಥವಾ ಬಡ್ಡಿಗೆ ಕಡಿತ ಮಾಡಿಕೊಳ್ಳದಂತೆ ಬ್ಯಾಂಕುಗಳು ಮತ್ತು ಹಣಕಾಸು ಸಂಸ್ಥೆಗಳಿಗೆ ಸ್ಪಷ್ಟ ನಿರ್ದೇಶನ ಮುಖ್ಯಮಂತ್ರಿ ಆದೇಶಮಾಡಿದ್ದಾರೆ ಎಂದು ಗ್ಯಾರಂಟಿ ಅನುಷ್ಠಾನ ಪ್ರಧಿಕಾರದ ರಾಜ್ಯ ಉಪಾಧ್ಯಕ್ಷ ದಿನೇಶ್ ಗೂಳಿಗೌಡ ತಿಳಿಸಿದ್ದಾರೆ.
ಮುಖ್ಯಮಂತ್ರಿ, ಸರಕಾರದ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದು ಬ್ಯಾಂಕ್ಗಳಿಗೆ ಸೂಚನೆ ರವಾನಿಸುವಂತೆ ಸೂಚನೆ ನೀಡಿದ್ದಾರೆ ಎಂದರು.













