ಪಡಿತರ ಅಕ್ಕಿ ಕಳ್ಳರ ಜೊತೆ ಪೊಲೀಸ್‌ ಡೀಲ್!!‌ ಮುಖ್ಯಮಂತ್ರಿ ಪದಕ ವಿಜೇತ ಸಿಪಿಐ ಜೊತೆ ಸೇರಿಕೊಂಡ ನಾಲ್ಕು ಪೊಲೀಸ್‌!! ಪ್ರಿಯಾಂಕ್‌ ಖರ್ಗೆ ತವರೂರಲ್ಲೇ ಅಕ್ರಮ ಚಟುವಟಿಕೆ!!

ಕಲಬುರಗಿ: ಮಹಾರಾಷ್ಟ್ರಕ್ಕೆ ಅಕ್ರಮವಾಗಿ ಪಡಿತರ ಅಕ್ಕಿ ಸಾಗಿಸುತ್ತಿದ್ದ ವಾಹನವನ್ನು ಜಪ್ತಿ ಮಾಡಿದ ಬಳಿಕ, ಪ್ರಕರಣ ದಾಖಲಿಸದೆ ಹಣ ಪಡೆದು ವಾಹನವನ್ನು ಬಿಟ್ಟು ಕಳುಹಿಸಿದ ಆರೋಪದ ಹಿನ್ನೆಲೆಯಲ್ಲಿ ಆಳಂದ ಸಿಪಿಐ ಸೇರಿ ನಾಲ್ವರನ್ನು ಅಮಾನತ್ತುಗೊಳಿಸಲಾಗಿದೆ.
ಮುಖ್ಯಮಂತ್ರಿ ಪದಕ ವಿಜೇತ, ಆಳಂದ ಸಿಪಿಐ ಶರಣಬಸಪ್ಪ ಕೋಡ್ಲಾ ಸೇರಿ ನಾಲ್ವರು ಸಿಬ್ಬಂದಿಯೇ ಅಮಾನತ್ತುಗೊಂಡಿದ್ದಾರೆ. ಸಿಪಿಐ ಶರಣಬಸಪ್ಪ ಕೋಡ್ಲಾ, ಪೇದೆಗಳಾದ ಹಣಮಂತ, ಮಲ್ಲಿಕಾರ್ಜುನ ಹಾಗೂ ಸಾಯಬಣ್ಣ ಅಮಾನತುಗೊಂಡವರು.
ಕಳೆದ ಸೋಮವಾರ ಮಧ್ಯರಾತ್ರಿ 112ಕ್ಕೆ ದೂರು ಬಂದ ಮಾಹಿತಿ ಆಧರಿಸಿ ಆಳಂದ ಪೊಲೀಸರು ಆಳಂದ ಮಾರ್ಗವಾಗಿ ಮಹಾರಾಷ್ಟ್ರಕ್ಕೆ ಅಕ್ರಮವಾಗಿ ಪಡಿತರ ಅಕ್ಕಿ ಸಾಗಿಸುತ್ತಿದ್ದ ವಾಹನವನ್ನು ಜಪ್ತಿ ಮಾಡಿದ್ದರು. ವಾಹನವನ್ನು ಠಾಣೆಗೆ ತಂದ ಬಳಿಕ ಪ್ರಕರಣ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳುವ ಬದಲು ₹1 ಲಕ್ಷಕ್ಕೆ ‘ಡೀಲ್’ ನಡೆಸಿ ವಾಹನವನ್ನು ಬಿಟ್ಟು ಕಳುಹಿಸಲಾಗಿದೆ ಎಂಬ ಆರೋಪ ಕೇಳಿಬಂದಿತ್ತು.

Advertisement

ಈ ಕುರಿತು ಮಾಧ್ಯಮಗಳಲ್ಲಿ ನಿರಂತರವಾಗಿ ವರದಿಗಳು ಪ್ರಕಟವಾದ ಬೆನ್ನಲ್ಲೇ ಗೃಹ ಇಲಾಖೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಇಲಾಖಾ ಮಟ್ಟದಲ್ಲಿ ತನಿಖೆ ನಡೆಸಲಾಗಿ, ತನಿಖೆಯಲ್ಲಿ ಕರ್ತವ್ಯ ಲೋಪ ಹಾಗೂ ಪ್ರಕರಣದ ನಿರ್ವಹಣೆಯಲ್ಲಿ ನಿಯಮಬಾಹಿರ ನಡೆ ನಡೆದಿರುವುದು ಕಂಡುಬಂದ ಹಿನ್ನೆಲೆಯಲ್ಲಿ ಸಿಪಿಐ ಸೇರಿದಂತೆ ನಾಲ್ವರು ಸಿಬ್ಬಂದಿ ವಿರುದ್ಧ ಶಿಸ್ತು ಕ್ರಮ ಜರುಗಿಸಲಾಗಿದೆ. ಮುಖ್ಯಮಂತ್ರಿ ಪದಕ ಪಡೆದಿದ್ದ ಆಳಂದ ಸಿಪಿಐ ಶರಣಬಸಪ್ಪ ಕೋಡ್ಲಾ ಅವರ ವಿರುದ್ಧವೇ ಇಂತಹ ಗಂಭೀರ ಆರೋಪ ಕೇಳಿಬಂದು ಅಮಾನತು ಕ್ರಮಕ್ಕೆ ಒಳಗಾಗಿರುವುದು ಪೊಲೀಸ್ ಇಲಾಖೆಯಲ್ಲಿ ಗಮನ ಸೆಳೆದಿದೆ. ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರ ತವರು ಜಿಲ್ಲೆಯಲ್ಲಿ ನಡೆದಿರುವ ಈ ಪ್ರಕರಣ ಇಲಾಖೆಯ ಕಾರ್ಯವೈಖರಿ ಬಗ್ಗೆಯೂ ಪ್ರಶ್ನೆಗಳನ್ನು ಹುಟ್ಟುಹಾಕಲಾಗಿದೆ.
ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಪಡಿತರ ಅಕ್ಕಿ ಜಪ್ತಿ ಮಾಡಿದ ಬಳಿಕ ನಡೆದಿರುವ ಬೆಳವಣಿಗೆ, ವಾಹನ ಬಿಟ್ಟುಕಳುಹಿಸಿದ ಆರೋಪ ಹಾಗೂ ಹಣದ ವ್ಯವಹಾರದ ಕುರಿತು ಇಲಾಖಾ ತನಿಖೆಯಲ್ಲಿ ಸ್ಪಷ್ಟವಾಗಿ ಗೊತ್ತಾಗಲಿದೆ ಎಂದು ಪತ್ರಿಕಾ ವರದಿ ತಿಳಿಸಿದೆ.

Advertisement
Advertisement

Share this article

Subscribe

By pressing the Subscribe button, you confirm that you have read our Privacy Policy.

Latest News

Advertisement

More News

You cannot copy content of this page