ನ್ಯೂಯೋರ್ಕ್ : ಅಮೆರಿಕದ ಓಹಿಯೋ ಗ್ರೇಟರ್ ಕ್ಲೀವ್ ಲ್ಯಾಂಡ್ ಪ್ರದೇಶದಲ್ಲಿರುವ ಹಿಂದೂ ದೇವಾಲಯದ ಮೇಲೆ ಕಿಡಿಗೇಡಿಗಳು ಇಟ್ಟಿಗೆಗಳಿಂದ ದಾಳಿ ನಡೆಸಿರುವ ಘಟನೆ ನಡೆದಿದ್ದು, ಘಟನೆಯಿಂದಾಗಿ ದೇವಸ್ಥಾನದ ಕಟ್ಟಡಕ್ಕೆ ಹಾನಿಯಾಗಿದೆ ಮತ್ತು ಕಿಟಕಿ ಗಾಜುಗಳು ಪುಡಿಯಾಗಿವೆ ಎಂದು ಅಮೆರಿಕ ಮೂಲದ ಹಿಂದೂಪರ ಸಂಘಟನೆಯೊಂದು ತಿಳಿಸಿದೆ ಎಂದು ಜಾಲತಾಣ ಮೂಲಗಳು ವರದಿ ಮಾಡಿವೆ.
ಶುಕ್ರವಾರ ಮಧ್ಯಾಹ್ನ 1:30ರ ಸುಮಾರಿಗೆ ಈ ಘಟನೆ ನಡೆದಿದ್ದು, ದಾಳಿಯ ಸಂದರ್ಭದಲ್ಲಿ ದೇವಾಲಯದ ಒಳಗೆ ಅರ್ಚಕರು ಮತ್ತು ಭಕ್ತರು ಉಪಸ್ಥಿತರಿದ್ದರು ಎಂದು ವರದಿಯಾಗಿದೆ. ಇಟ್ಟಿಗೆಗಳ ತೂರಾಟದಿಂದ ದೇವಾಲಯದ ಕಿಟಕಿ ಗಾಜುಗಳು ಒಡೆದು ಹೋಗಿದ್ದು, ಕಟ್ಟಡಕ್ಕೆ ಗಣನೀಯ ಹಾನಿಯಾಗಿದೆ ಎಂದು ಹೇಳಲಾಗಿದೆ.
ದೇವಾಲಯದ ಮೇಲೆ ನಡೆಸಿದ ಘಟನೆಯನ್ನು ಹಿಂದೂ ಸಂಘಟನೆಗಳು ಖಂಡಿಸಿದ್ದು ಆರೋಪಿಗಳನ್ನು ಬಂಧಿಸಿ ಕಠಿಣ ಶಿಕ್ಷೆ ನೀಡಬೇಕೆಂದು ಹಿಂದೂ ಸಂಘಟನೆ ಆಗ್ರಹಿಸಿದೆ. ಇನ್ನೂ ಹತ್ತು ದಿನಗಳಲ್ಲಿ ನವರಾತ್ರಿ ಆರಂಭಗೊಳ್ಳಲಿದ್ದು ಇದಕ್ಕಾಗಿ ಭಾರತೀಯ-ಅಮೆರಿಕನ್ ಸಮುದಾಯ ಸಿದ್ಧತೆ ನಡೆಸುತ್ತಿರುವ ಸಂದರ್ಭದಲ್ಲೇ ಈ ದಾಳಿ ನಡೆದಿದೆ.
ಅಮೆರಿಕದಲ್ಲಿ ಈ ಹಿಂದೆಯೊ ಧಾರ್ಮಿಕ ಕೇಂದ್ರಗಳ ಮೇಲಿನ ದಾಳಿ ನಡೆದಿದ್ದು . 2022ರ ಆಗಸ್ಟ್ನಲ್ಲಿ ನ್ಯೂಯಾರ್ಕ್ನ ಕ್ವೀನ್ಸ್ನಲ್ಲಿರವ ಶ್ರೀ ತುಳಸಿ ಮಂದಿರದಲ್ಲಿನ ಮಹಾತ್ಮ ಗಾಂಧಿ ಪ್ರತಿಮೆಯನ್ನು ಧ್ವಂಸಗೊಳಿಸಲಾಗಿತ್ತು . 2023ರ ಡಿಸೆಂಬರ್ನಲ್ಲಿ ಕ್ಯಾಲಿಫೋರ್ನಿಯಾದ ನೆವಾರ್ಕ್ನಲ್ಲಿರುವ ಶ್ರೀ ಸ್ವಾಮಿನಾರಾಯಣ ದೇವಾಲಯದ ಗೋಡೆಗಳಲ್ಲಿ ಹಿಂದೂ ವಿರೋಧಿ ಬರಹಗಳನ್ನು ಬರೆಯಲಾಗಿತ್ತು . 2024ರಲ್ಲಿ ನ್ಯೂಯಾರ್ಕ್ ಮತ್ತು ಕ್ಯಾಲಿಫೋರ್ನಿಯಾದಲ್ಲಿರುವ ದೇವಾಲಯಗಳ ಗೋಡೆಗಳ ಮೇಲೂ ದಾಳಿ ನಡೆದಿರುವುದಾಗಿ ಸಂಘಟನೆ ತಿಳಿಸಿದೆ ಎಂದು ವರದಿಯಾಗಿದೆ.













