ಪುತ್ತೂರು: ದರ್ಬೆ ಗಲಾಟೆ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ ಶಾಂತಿ ಕದಡುವ ಸಂದೇಶ ಪ್ರಸಾರ ಮಾಡಿ ಬಂದ್‌ಗೆ ಕರೆ ನೀಡಿದ ಆರೋಪ ಎದುರಿಸುತ್ತಿದ್ದ ಹಿಂದೂ ಕಾರ್ಯಕರ್ತ ದಿನೇಶ್ ಪಂಜಿಗ ವಿರುದ್ಧ ಎಫ್‌ಐಆರ್ ಮತ್ತು ತನಿಖೆಗೆ ಹೈಕೋರ್ಟ್ ತಡೆ ನೀಡಿದೆ.
ಕೋರ್ಟ್ ಹಿಂದೆ ಬಲವಂತದ ಕ್ರಮ ಮಾಡಬಾರದೆಂದು ನಿರ್ದೇಶನ ಕೊಟ್ಟಿತ್ತು. ಇದೀಗ ಹಿರಿಯ ನ್ಯಾಯವಾದಿ ಡಾ. ಅರುಣ್ ಶ್ಯಾಮ್ ಅವರ ಸುಧೀರ್ಘ ವಾದ ಆಲಿಸಿ ಪ್ರಕರಣಕ್ಕೆ ತಡೆ ಆಜ್ಞೆ ನೀಡಿದೆ.
ಪುತ್ತೂರು ನಗರ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣವನ್ನು ವಿಚಾರಣೆ ನಡೆಸಿದ ನ್ಯಾಯಮೂರ್ತಿ ಅನಂತ ರಾಮನಾಥ ಹೆಗಡೆ ಅವರಿದ್ದ ಏಕಸದಸ್ಯ ಪೀಠವು ಈ ನಿರ್ದೇಶನ ನೀಡಿದೆ. ಅರ್ಜಿದಾರರ ಪರವಾಗಿ ಹಿರಿಯ ನ್ಯಾಯವಾದಿ ಡಾ. ಅರುಣ್ ಶ್ಯಾಮ್ ವಾದ ಮಂಡಿಸಿದ್ದರು.










