ಮಂಗಳೂರು ಪೊಲೀಸರ ಯಶಸ್ವೀ ಕಾರ್ಯಾಚರಣೆ! ₹1.63 ಕೋಟಿ ಮೌಲ್ಯದ ಡ್ರಗ್ಸ್‌ ವಶ! ಕೋರಿಯರ್ ಮೂಲಕ MDMA ಸಾಗಾಟ ಮತ್ತು ಮಾರಾಟ ಮಾಡುತ್ತಿದ್ದ ಬೃಹತ್‌ ಜಾಲ ಪತ್ತೆ!!

ಮಂಗಳೂರು ಸಿಸಿಬಿ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಮಂಗಳೂರು ನಗರದಲ್ಲಿ ನಿಷೇಧಿತ ಮಾದಕವಸ್ತು MDMA ಯನ್ನು ಮಾರಾಟ ಮಾಡುತ್ತಿದ್ದ ಆರೋಪಿತರನ್ನು ಬಂಧಿಸಿ, ಸುಮಾರು 1 ಕೋಟಿ 63 ಲಕ್ಷದ 34 ಸಾವಿರ ಮೌಲ್ಯದ 1.796.96 ಗ್ರಾಂ MDMA ಮಾದಕ ವಸ್ತುವನ್ನು ವಶಪಡಿಸಿಕೊಂಡಿದ್ದಾರೆ.

Advertisement

ಮಂಗಳೂರು ನಗರದಲ್ಲಿ ಸಾರ್ವಜನಿಕರನ್ನು ಗುರಿಯಾಗಿಸಿಕೊಂಡು ನಿಷೇಧಿತ ಮಾದಕವಸ್ತು MDMA ಮಾರಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಸಿಸಿಬಿ ಪೊಲೀಸರು ದಿನಾಂಕ ಅ.8ರಂದು ರಾತ್ರಿ 10 ಗಂಟೆ ಸುಮಾರಿಗೆ ಉಳ್ಳಾಲ ತಾಲೂಕಿನ ಕುಂಪಲದ ಡಿಮಾರ್ಟ್ ಬಳಿ ಕಾರ್ಯಾಚರಣೆ ನಡೆಸಿ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗಳಿಂದ 1 ಕೆಜಿ 796.96 ಗ್ರಾಂ ಎಂಡಿಎಂಎ ಹಾಗೂ 03 ಮೊಬೈಲ್ ಫೋನ್, ಮಾದಕ ವಸ್ತು ಸಾಗಾಟಕ್ಕೆ ಬಳಸಿದ ಮಾರುತಿ ಸುಜುಕು ಸ್ವೀಪ್ಟ್ ಕಾರು ಮತ್ತು ಆಟೋ ರಿಕ್ಷಾ, ಕೋರಿಯರ್ ರಟ್ಟಿನ ಬಾಕ್ಸ್, ವಾಟರ್ ಪ್ಯೂರಿಪಾಯರ್ ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತುಗಳ ಒಟ್ಟು ಮೌಲ್ಯ- 1,63,84,000/- ಆಗಿರುತ್ತದೆ. ಈ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

Advertisement
Advertisement

ಆರೋಪಿಗಳಾದ ಕಾಸರಗೋಡಿನ ಮಂಗಲ್ಪಾಡಿಯ ಬೈದಲಾದ ಅಬ್ದುಲ್ ಹಾಪೀಲ್ (25), ಕೂಳೂರಿನ ಕಸಬ ಬೆಂಗ್ರೆಯ ಜಿಯಾವುಲ್ ಹಕ್ (30) ಮತ್ತು ಪಾಂಡೇಶ್ವರದ ಓಲ್ಡ್‌ ಕೆಟ್‌ ರೋಡ್‌ನಲ್ಲಿರುವ ಆಯಿಷಾ ಅಪಾರ್ಟ್‌ಮೆಂಟ್‌ ನಿವಾಸಿ ಅಲ್ತಾಫ್ (28) ಪೊಲೀಸರು ಹೆಡೆಮುರಿಕಟ್ಟಿದ್ದಾರೆ.

ಇನ್ನು ಆರೋಪಿ ಅಬ್ದುಲ್ ಹಾಪೀಲ್ ಎಂಬಾತನ ವಿರುದ್ದ ಈ ಹಿಂದೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಮಾದಕವಸ್ತು ಸೇವನೆ ಮಾಡಿದ ಪ್ರಕರಣ ಮತ್ತು ಆರೋಪಿ ಜಿಯಾವುಲ್ ಹಕ್ ಎಂಬಾತನ ವಿರುದ್ದ ದುಬೈ ದೇಶದ ರಸ್-ಅಲ್- ಖೈಮಾ ಎಂಬಲ್ಲಿ ಮಾದಕವಸ್ತು ಮಾರಾಟ ಪ್ರಕರಣದಲ್ಲಿ ಭಾಗಿಯಾಗಿ 03 ವರ್ಷಗಳ ಕಾಲ ಜೈಲ್ ಶಿಕ್ಷೆ ಅನುಭವಿಸಿ ಬಳಿಕ ಭಾರತಕ್ಕೆ ಬಂದಿರುವ ಮಾಹಿತಿ ಲಭಿಸಿದೆ. ಆರೋಪಿ ಅಲ್ತಾಫ್ ಎಂಬಾತನ ವಿರುದ್ದ ಈ ಹಿಂದೆ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಮಾದಕವಸ್ತು ಸೇವನೆ ಮಾಡಿದ ಬಗ್ಗೆ ಪ್ರಕರಣ ದಾಖಲಾಗಿರುತ್ತದೆ.
ಆರೋಪಿಗಳು ಪಂಜಾಬ್ ರಾಜ್ಯದ ಅಮೃತಸರದಿಂದ ಎಂಡಿಎಂಎ ಮಾದಕವಸ್ತುವನ್ನು ಖರೀದಿಸಿ, ಅದನ್ನು ವಾಟರ್ ಪ್ಯೂರಿಫೈಯರ್ ನ ನೀರು ಸಂಗ್ರಹವಾಗುವ ಸ್ಥಳದಲ್ಲಿ MDMA ಅನ್ನು ಭದ್ರವಾಗಿ ಒಳಗೆ ಇರಿಸಿ, ಬಳಿಕ ಕೋರಿಯರ್ ಮೂಲಕ ಮಂಗಳೂರಿಗೆ ಕಳುಹಿಸಿ, ನಂತರ ಈ ಮಾದಕವಸ್ತುವನ್ನು ಕೇರಳ ರಾಜ್ಯ ಹಾಗೂ ಮಂಗಳೂರು ನಗರದ ವಿವಿಧ ಪ್ರದೇಶಗಳಿಗೆ ಪೂರೈಕೆ ಮಾಡಿ ಮಾರಾಟ ಮಾಡಲು ಸಂಚು ರೂಪಿಸಿದ್ದು, ಪ್ರಾರಂಭದಲ್ಲಿಯೇ ಜಾಲವನ್ನು ಪತ್ತೆಹಚ್ಚುವಲ್ಲಿ ಮತ್ತು ತಡೆಗಟ್ಟುವಲ್ಲಿ ಯಶಸ್ವಿಯಾಗಿದ್ದಾರೆ. ಸದ್ರಿ ಮೂರು ಜನ ಆರೋಪಿಗಳನ್ನು ವಿಚಾರಣೆಗೆ ಒಳಪಡಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದೆಂದು ಪೊಲೀಸ್‌ ಪ್ರಕಟನೆಯಲ್ಲಿ ತಿಳಿಸಲಾಗಿದೆ.

Share this article

Subscribe

By pressing the Subscribe button, you confirm that you have read our Privacy Policy.

Latest News

Advertisement

More News

You cannot copy content of this page