ಮಂಗಳೂರು: ಧರ್ಮಸ್ಥಳದ ಸೌಜನ್ಯ ಪ್ರಕರಣದ ಪಾರದರ್ಶಕ ಮರುತನಿಖೆ ಆಗ್ರಹಿಸಿ ಸೌಜನ್ಯ ಪರ ಹೋರಾಟಗಾರರು ಉಜಿರೆಯಿಂದ ಬೆಳ್ತಂಗಡಿವರೆಗೆ ಮೌನದ ಮೆರವಣಿಗೆಯೊಂದಿಗೆ ನ್ಯಾಯದ ನಡಿಗೆ ನಡೆದಿದೆ.
ಉಜಿರೆಯಿಂದ ಆರಂಭವಾದ ಬೃಹತ್ ಮೆರವಣಿಗೆಯಲ್ಲಿ ಸಹಸ್ರಾರು ಸಂಖ್ಯೆಯಲ್ಲಿ ಜನರು ಭಾಗವಹಿಸಿದ್ದು, ಮೌನ ಮೆರವಣಿಗೆಯ ಮೂಲಕ ಸೌಜನ್ಯಳಿಗೆ ನ್ಯಾಯ ದೊರಕಿಸಿಕೊಡಬೇಕೆಂದು ಆಗ್ರಹಿಸಲಾಗಿದೆ. ಸುಮಾರು ಐದು ಕಿಲೋಮೀಟರ್ ಹೋರಾಟಗಾರರು ನಡಿಗೆಯಲ್ಲಿ ಭಿತ್ತಿಪತ್ರಗಳೊಂದಿಗೆ ಸಾಗಿದ್ದಾರೆ.
ಮೌನದೊಂದಿಗೆ ನ್ಯಾಯದ ನಡಿಗೆಯ ಬಳಿಕ ಬೆಳ್ತಂಗಡಿಯ ಮೈದಾನದಲ್ಲಿ ಬೃಹತ್ ಅಭಿನಂದನಾ ಸಮಾವೇಶ ನಡೆಯಿತು. ಸೌಜನ್ಯ ಪರವಾಗಿ ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್‌ನಲ್ಲಿ ವಾದ ಮಂಡಿಸಿದ ವಕೀರ ತಂಡಕ್ಕೆ ಈ ಸಂದರ್ಭದಲ್ಲಿ ಅಭಿನಂದನೆ ಸಲ್ಲಿಸಲಾಗಿದೆ. ಇನ್ನು ಅಭಿನಂದನಾ ಸಮಾವೇಶದಲ್ಲಿ ಹಲವಾರು ಗಣ್ಯರು ಭಾಗವಹಿಸಿದ ಮಾಹಿತಿ ದೊರೆತಿದೆ.














