“ಪೊಳಲಿ ಯಕ್ಷೋತ್ಸವ 2026” | ಈ ಬಾರಿಯ ವಿಶೇಷತೆಗಳೇನು ಗೊತ್ತಾ? ತಪ್ಪದೇ ಓದಿ…

ಮಂಗಳೂರು: ಅ.11ರಂದು ಶ್ರೀ ಕ್ಷೇತ್ರ ಪೊಳಲಿಯಲ್ಲಿ ಯಕ್ಷಕಲಾ ಪೊಳಲಿ ಸಂಘಟನೆಯಿಂದ ವಾರ್ಷಿಕ ಸಂಭ್ರಮ ಪೊಳಲಿ ಯಕ್ಷೋತ್ಸವ ನಡೆಯಲಿದೆ. ಸಂಜೆ 5.30 ರಿಂದ 7 ಗಂಟೆಯವರೆಗೆ ಜರಗುವ ಸಭಾ ಪರ್ವದಲ್ಲಿ ಕಟೀಲು ಮೇಳಗಳ ಸಂಚಾಲಕ ದೇವಿಪ್ರಸಾದ ಶೆಟ್ಟಿ ಅವರಿಗೆ ಪೊಳಲಿ ಯಕ್ಷೋತ್ಸವ ಪ್ರಶಸ್ತಿ ನೀಡಿ ಗೌರವಿಸಲಾಗುವುದು.

Advertisement

ಅಂದು ಬೆಳಗ್ಗೆ 8.30 ರಿಂದ ರಾತ್ರಿ 10.30ರವರೆಗೆ ಕಾರ್ಯಕ್ರಮ ನಡೆಯಲಿದೆ. ಬೆಳಿಗ್ಗೆ 8.30ರಿಂದ ಸಂಜೆ 5.30ರ ವರೆಗೆ ಹಾಗೂ ಸಂಜೆ 7.30ರಿಂದ 10.30ರ ವರೆಗೆ ತೆಂಕುತಿಟ್ಟಿನ ಪ್ರಸಿದ್ಧ ಕಲಾವಿದರಿಂದ ರಾಜಾಯಯಾತಿ, ಇಂದ್ರ ಕೀಲಕ, ರಾಮಾಂಜನೇಯ ಎಂಬ ಯಕ್ಷಗಾನ ಬಯಲಾಟ ಸಂಪನ್ನಗೊಳ್ಳಲಿದೆ. ಸಮಾರಂಭದಲ್ಲಿ ರಾಮಕೃಷ್ಣ ತಪೋವನ ಪೊಳಲಿಯ ವಿವೇಕ ಚೈತನ್ಯಾನಂದ ಸ್ವಾಮೀಜಿಯವರು ಆಶೀರ್ವಚನ ನೀಡಲಿರುವರು. ಶಾಸಕ ರಾಜೇಶ್‌ ನಾಯ್ಕ್‌ ಉಳಿಪ್ಪಾಡಿಗುತ್ತು ಅಧ್ಯಕ್ಷತೆ ವಹಿಸಲಿರುವರು.

Advertisement
Advertisement

Share this article

Subscribe

By pressing the Subscribe button, you confirm that you have read our Privacy Policy.

Latest News

Advertisement

More News

You cannot copy content of this page