ಪುತ್ತೂರು : ಪುತ್ತೂರಿನ ಮುಖ್ಯರಸ್ತೆಯಲ್ಲಿರುವ ಯಾರೂ ವಾಸವಿಲ್ಲದ ಮನೆಗೆ ನಸುಕಿನ ಜಾವ ಬೆಂಕಿ ಹತ್ತಿಕೊಂಡ ಘಟನೆ ನಡೆದಿದೆ.
ಪುತ್ತೂರಿನ ಸೋಜಾ ಅಲ್ಯೂಮಿನಿಯಂ ಸಂಸ್ಥೆಯ ಎದುರಿನಲ್ಲಿರುವ ಹಳೆಯ ಮನೆಗೆ ನಸುಕಿನ ಸಮಯದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ತಕ್ಷಣ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ ಬೆಂಕಿಯನ್ನು ನಂದಿಸುವ ಕಾರ್ಯಾಚರಣೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.














