ಇರಾನ್‌ ರಾಷ್ಟ್ರೀಯ ಭದ್ರತಾ ಮಂಡಳಿ ಜೊತೆ ಅಜಿತ್‌ ದೋವಲ್‌ ಮಹತ್ವದ ಚರ್ಚೆ! ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ!!

ಪಶ್ಚಿಮ ಏಷ್ಯಾದಲ್ಲಿ ಮುಂದುವರಿದಿರುವ ಬಿಕ್ಕಟ್ಟು ಹಾಗೂ ಅನಿಶ್ಚಿಶತೆಯ ನಡುವೆ ಭಾರತದ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಅವರು ಇರಾನ್‌ನ ರಾಷ್ಟ್ರೀಯ ಭದ್ರತಾ ಮಂಡಳಿಯ ಮುಖ್ಯಸ್ಥ ಮೊಹ್ಸಿನ್ ರೆಜಾಯ್ ಅವರೊಂದಿಗೆ ದೂರವಾಣಿ ಮೂಲಕ ಮಾತುಕತೆ ನಡೆಸಿದ್ದಾರೆ.
ಈ ಕುರಿತು ಇರಾನ್ ರಾಯಭಾರ ಕಚೇರಿ ಸಾಮಾಜಿಕ ಮಾಧ್ಯಮ ‘ಎಕ್ಸ್’ನಲ್ಲಿ ಮಾಹಿತಿ ಹಂಚಿಕೊಂಡಿದೆ. ಸಮಕಾಲೀನ ಪ್ರಾದೇಶಿಕ ಹಾಗೂ ಅಂತರರಾಷ್ಟ್ರೀಯ ವಿದ್ಯಮಾನಗಳು ಮತ್ತು ಉಭಯ ದೇಶಗಳ ಪರಸ್ಪರ ಹಿತಾಸಕ್ತಿಗೆ ಸಂಬಂಧಿಸಿದಂತೆ ಪ್ರಮುಖ ವಿಷಯಗಳ ಕುರಿತು ರೆಜಾಯ್ ಹಾಗೂ ದೋವಲ್ ಸುದೀರ್ಘವಾಗಿ ಚರ್ಚಿಸಿದ್ದಾರೆ ಎಂದು ಜಾಲತಾಣ ಮೂಲಗಳಿಂದ ವರದಿಯಾಗಿದೆ.

Advertisement

ಸೌದಿ ಅರೇಬಿಯಾದ ವಿಮಾನ ನಿಲ್ದಾಣಗಳು ಸೇರಿದಂತೆ ಅಲ್ಲಿನ ನಾಗರಿಕ ಪ್ರದೇಶಗಳ ಮೇಲೆ ಇತ್ತೀಚೆಗೆ ನಡೆದ ಸರಣಿ ದಾಳಿಗಳ ಕುರಿತಾಗಿಯೂ ಉಭಯ ನಾಯಕರು ಚರ್ಚಿಸಿದ್ದಾರೆ ಎಂದು ತಿಳಿದು ಬಂದಿದೆ. ರಿಯಾದ್‌ನಲ್ಲಿರುವ ಸೌದಿ ಅರೇಬಿಯಾದ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಮೇಲೆ ಭಾನುವಾರ ನಡೆದ ಭೀಕರ ದಾಳಿಯನ್ನು ಭಾರತ ಖಂಡಿಸಿತ್ತು. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ 12 ಮಂದಿ ಮೃತಪಟ್ಟಿದ್ದು, 300ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು. ಪಶ್ಚಿಮ ಏಷ್ಯಾದ ಬಿಕ್ಕಟ್ಟನ್ನು ರಾಜತಾಂತ್ರಿಕ ಮಾತುಕತೆಗಳ ಮೂಲಕವೇ ಬಗೆಹರಿಸಿಕೊಳ್ಳಬೇಕು. ಅಲ್ಲದೆ ನಾಗರಿಕ ಮೂಲಸೌಕರ್ಯಗಳನ್ನು ಗುರಿಯಾಗಿಸುವುದನ್ನು ನಿಲ್ಲಿಸಬೇಕು ಎಂದು ಭಾರತ ನಿರಂತರವಾಗಿ ಪ್ರತಿಪಾದಿಸುತ್ತಾ ಬಂದಿದೆ ಎಂದು ವರದಿಗಳು ತಿಳಿಸಿವೆ.

Advertisement

Share this article

Subscribe

By pressing the Subscribe button, you confirm that you have read our Privacy Policy.

Latest News

Advertisement

More News

You cannot copy content of this page