ತುಮಕೂರಿನ ಸದಾಶಿವನಗರದ 8ನೇ ಕ್ರಾಸ್ನಲ್ಲಿರುವ ಶೆಡ್ನಲ್ಲಿ ಅಕ್ರಮವಾಗಿ ಗೋಮಾಂಸ ಮಾರಾಟ ಮಾಡಲಾಗುತ್ತಿದೆ ಭಜರಂಗದಳ ಕಾರ್ಯಕರ್ತರು ನೀಡಿದ ಸ್ಫೊಟಕ ಮಾಹಿತಿ ಮೇರೆಗೆ ತಿಲಕ್ ಪಾರ್ಕ್ ಠಾಣೆ ಪೊಲೀಸರು ದಾಳಿ ನಡೆಸಿ, ಗೋಮಾಂಸ ಸಹಿತ ನವಾಜ್ ಎಂಬ ವ್ಯಕ್ತಿಯನ್ನು ವಶಕ್ಕೆ ಪಡೆದಿದ್ದಾರೆ.
ಗೋಮಾಂಸವನ್ನು ಸದಾಶಿವನಗರದ 8ನೇ ಕ್ರಾಸ್ನ ಶೆಡ್ನಲ್ಲಿ ನವಾಜ್ ಎಂಬ ವ್ಯಕ್ತಿ ಮಾರಾಟ ಮಾಡುತ್ತಿದ್ದಾನೆ ಎಂಬ ಮಾಹಿತಿ ಭಜರಂಗದಳ ಕಾರ್ಯಕರ್ತರಿಗೆ ಲಭ್ಯವಾಗಿತ್ತು. ಈ ಹಿನ್ನೆಲೆಯಲ್ಲಿ ERSS-112 ತುರ್ತು ಸಹಾಯವಾಣಿಗೆ ಕರೆ ಮಾಡಿ ಮಾಹಿತಿ ನೀಡಲಾಗಿತ್ತು. ತಿಲಕ್ ಪಾರ್ಕ್ ಠಾಣೆ ಪೊಲೀಸರು ಮಾಹಿತಿ ಆಧರಿಸಿ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.
ಈ ಸಂದರ್ಭದಲ್ಲಿ ನವಾಜ್ನನ್ನು ಗೋಮಾಂಸ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ವಶಕ್ಕೆ ಪಡೆದು, ಗೋಮಾಂಸವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ತಿಳಿದುಬಂದಿದೆ. ತಿಲಕ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಈ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ ಎಂದು ಮೂಲಗಳು ಹೇಳಿವೆ.












