ಮಂಗಳೂರು : ಅ.15ರಂದು ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಿಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಪ್ರವಾಸ ಕೈಗೊಳ್ಳಲಿದ್ದಾರೆ.
ಮಂಗಳೂರು ವಿಮಾನ ನಿಲ್ದಾಣಕ್ಕೆ ಗುರುವಾರ ಮಧ್ಯಾಹ್ನ 4.10ಕ್ಕೆ ಆಗಮಿಸಲಿರುವ ಅವರು, ಕಾಪು ಉಚ್ಚಿಲದಲ್ಲಿ 4.40ಕ್ಕೆ ನಡೆಯಲಿರುವ ದಸರಾ ಅಭಿನಂದನಾ ಸಮಾರಂಭ ಹಾಗೂ ಮಹಿಳಾ ದಸರಾ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ನಂತರ ಮಂಗಳೂರಿನಲ್ಲಿ ಸಂಜೆ 6.30ಕ್ಕೆ ನಡೆಯಲಿರುವ ಮಂಗಳೂರು ದಸರಾ ನವರಾತ್ರಿ ಮಹೋತ್ಸವದಲ್ಲಿ ಪಾಲ್ಗೊಳ್ಳಲಿದ್ದಾರೆ. ಮಂಗಳೂರು ವಿಮಾನ ನಿಲ್ದಾಣಕ್ಕೆ ರಾತ್ರಿ 8 ಗಂಟೆಗೆ ತೆರಳಿ ಅಲ್ಲಿಂದ ಬೆಂಗಳೂರಿಗೆ ನಿರ್ಗಮಿಸಲಿದ್ದಾರೆ.
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗೆ ಡಿಕೆಶಿ ಟೂರ್! ಇಲ್ಲಿದೆ ನೋಡಿ ಕಂಪ್ಲೀಟ್ ಡಿಟೈಲ್ಸ್!!












