ಇಸ್ಲಾಂಗೆ ಮತಾಂತರಗೊಂಡವರಿಗೆ ಮೀಸಲಾತಿ ಸೌಲಭ್ಯ ರದ್ದು! ಮದ್ರಾಸ್ ಹೈಕೋರ್ಟ್‌ ಅದೇಶವನ್ನು ಎತ್ತಿ ಹಿಡಿದ ಸುಪ್ರೀಂ ಕೋರ್ಟ್!!‌ ತಮಿಳುನಾಡು ಸರ್ಕಾರಕ್ಕೆ ಮುಖಭಂಗ!!

ಕೆಲವು ಹಿಂದೂ ಸಮುದಾಯಗಳಿಂದ ಇಸ್ಲಾಂ ಧರ್ಮಕ್ಕೆ ಮತಾಂತರಗೊಂಡವರಿಗೆ ‘ಹಿಂದುಳಿದ ವರ್ಗದ ಮುಸ್ಲಿಂ’ ಮೀಸಲಾತಿ ಸೌಲಭ್ಯಗಳನ್ನು ವಿಸ್ತರಿಸುವ ತಮಿಳುನಾಡು ಸರ್ಕಾರದ ನಿರ್ಧಾರವನ್ನು ರದ್ದುಗೊಳಿಸಿದ್ದ ಮದ್ರಾಸ್ ಹೈಕೋರ್ಟ್‌ನ ತೀರ್ಪನ್ನು ಸುಪ್ರೀಂ ಕೋರ್ಟ್ ಎತ್ತಿಹಿಡಿದಿದೆ.

Advertisement

ನ್ಯಾಯಮೂರ್ತಿಗಳಾದ ಪ್ರಶಾಂತ್ ಕುಮಾರ್ ಮಿಶ್ರಾ ಮತ್ತು ಚಂದ್ರಶೇಖರ್ ಅವರ ಪೀಠವು ತಮಿಳುನಾಡು ರಾಜ್ಯ ಸರ್ಕಾರದ ಅರ್ಜಿಯನ್ನು ವಜಾಗೊಳಿಸಿದೆ. ಮತಾಂತರಗೊಂಡವರಿಗೆ ‘ಹಿಂದುಳಿದ ವರ್ಗದ ಮುಸ್ಲಿಂ’ ಕೋಟಾ ಕಲ್ಪಿಸಲು ಮುಂದಾಗಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್‌ನ ತೀರ್ಪನ್ನು ಸಂಪೂರ್ಣವಾಗಿ ಎತ್ತಿಹಿಡಿದಿದೆ. “ಹಿಂದೂ ಸಾಮಾಜಿಕ ವ್ಯವಸ್ಥೆಯಿಂದ ಹಿಂದೂಯೇತರ ಸಾಮಾಜಿಕ ವ್ಯವಸ್ಥೆಗೆ ಮತಾಂತರಗೊಂಡ ವ್ಯಕ್ತಿಯೊಬ್ಬರು, ತಾವು ಮತಾಂತರಗೊಳ್ಳುವ ಮೊದಲು ಹೊಂದಿದ್ದ ಸಾಮಾಜಿಕ ಹಿಂದುಳಿದಿರುವಿಕೆಯ ಆಧಾರದ ಮೇಲೆ ಮಾತ್ರ, ಸಂವಿಧಾನದ 16(4)ನೇ ವಿಧಿಯ ಅಡಿಯಲ್ಲಿ ವಿಶೇಷ ಸೌಲಭ್ಯಗಳನ್ನು ಪಡೆಯಲು ಹಕ್ಕು ಸಾಧಿಸಲು ಸಾಧ್ಯವಿಲ್ಲ” ಎಂದು ನ್ಯಾಯಪೀಠವು ಹೇಳಿದ್ದಾಗಿ ‘ಬಾರ್ ಅಂಡ್ ಬೆಂಚ್’ ವರದಿ ಮಾಡಿದೆ. ಹಿಂದಿನ ಧರ್ಮದಲ್ಲಿ ಆತ ಅನುಭವಿಸಿದ ಸಾಮಾಜಿಕ ಹಿಂದುಳಿದಿರುವಿಕೆಯು ಹೊಸ ಧರ್ಮಕ್ಕೆ ಸ್ವಯಂಚಾಲಿತವಾಗಿ ವರ್ಗಾವಣೆಯಾಗುವುದಿಲ್ಲ ಎಂದು ನ್ಯಾಯಾಲಯ ಹೇಳಿದೆ.

Advertisement
Advertisement

ಹಿಂದೂ ಧರ್ಮಕ್ಕೆ ಮರು ಪರಿವರ್ತನೆ ಹೊಂದುವ ವ್ಯಕ್ತಿಯೊಬ್ಬರಿಗೆ, ಅವರು ಧರ್ಮ ಬದಲಾಯಿಸಿಕೊಳ್ಳುವ ಮೊದಲು ಹೊಂದಿದ್ದ ಹಿಂದುಳಿದ ಸ್ಥಾನಮಾನವು ನೇರವಾಗಿ ಮರುಸ್ಥಾಪನೆಯಾಗುವುದಿಲ್ಲ ಎಂದು ನ್ಯಾಯಾಲಯವು ಸ್ಪಷ್ಟಪಡಿಸಿದೆ.

Share this article

Subscribe

By pressing the Subscribe button, you confirm that you have read our Privacy Policy.

Latest News

Advertisement

More News

You cannot copy content of this page