ಕರ್ನಾಟಕ ಲೇಖಕಿಯರ ಸಂಘ ಬೆಂಗಳೂರು ಮತ್ತು ಕರಾವಳಿ ಲೇಖಕಿಯರ ಮತ್ತು ವಾಚಕಿಯರ ಸಂಘ ಮಂಗಳೂರು ಇದರ ಆಶ್ರಯದಲ್ಲಿ ಮಾಜಿ ಶಾಸಕಿ ಶಕುಂತಳಾ ಟಿ. ಶೆಟ್ಟಿ ಅವರ ಆತ್ಮಕಥೆ “ಚಿತ್ತ ಬಿತ್ತಿಯ ಪತ್ತಾಯ” ಪುಸ್ತಕ ಬಿಡುಗಡೆ ಸಮಾರಂಭ ಅ.4 ರಂದು ಬೆಂಗಳೂರಿನನ ಗಾಂಧಿ ಭವನದ ಬಾಪು ಸಭಾಂಗಣದಲ್ಲಿ ನಡೆಯಿತು.
ಕರ್ನಾಟಕ ಲೇಖಕಿಯರ ಸಂಘದ ಅಧ್ಯಕ್ಷೆ ಪ್ರೊ. ಆರ್. ಸುನಂದಮ್ಮ ಪುಸ್ತಕ ಬಿಡುಗಡೆಗೊಳಿಸಿ, ಮಾತನಾಡಿ ಶಕುಂತಲಾ ಟಿ. ಶೆಟ್ಟಿ ಅವರ ಆತ್ಮ ಕಥೆ ಪುಸ್ತಕ ಅತ್ಯಂತ ಮನೋಜ್ಞವಾಗಿ ಮೂಡಿ ಬಂದಿದೆ ಎಂದರು.
ಚಿತ್ರಕಲಾ ಪರಿಷತ್ ಅಧ್ಯಕ್ಷ ಡಾ. ಬಿ. ಎಲ್. ಶಂಕರ್ ಅವರು ಅಧ್ಯಕ್ಷತೆ ವಹಿಸಿದ್ದರು. ಪುಸ್ತಕದ ಕುರಿತು ಡಾ. ಪುರುಷೋತ್ತಮ ಬಿಳಿಮಲೆ ಮತ್ತು ಪುಸ್ತಕ ಪರಿಚಯವನ್ನು ಡಾ. ಜ್ಯೋತಿ ಚೇಳ್ಳಾರು ಮಾಡಿದರು. ಮಾಜಿ ಶಾಸಕಿ ಶಕುಂತಲಾ ಟಿ. ಶೆಟ್ಟಿ, ಕಲ್ಲೂರು ನಾಗೇಶ ಆಕೃತಿ ಆಶಯ ಪಬ್ಲಿಕೇಶನ್ಸ್ ಮಂಗಳೂರು ಉಪಸ್ಥಿತರಿದ್ದರು. ಕರ್ನಾಟಕ ಲೇಖಕಿಯರ ಸಂಘ ಬೆಂಗಳೂರು ಹಾಗೂ ಅಧ್ಯಕ್ಷರು ಮತ್ತು ಸರ್ವಸದಸ್ಯರು, ಕರಾವಳಿ ಲೇಖಕಿಯರ ಮತ್ತು ವಾಚಕಿಯರ ಸಂಘ ಮಂಗಳೂರು ಕಾರ್ಯಕ್ರಮ ಆಯೋಜನೆಗೈದರು.














