ಹೈದರಾಬಾದ್: ಖ್ಯಾತ ನಟಿ ಪ್ರತ್ಯುಷಾ ಅನುಮಾನಾಸ್ಪದ ಸಾವು ಪ್ರಕರಣದ ಬಗ್ಗೆ 24 ವರ್ಷಗಳ ಬಳಿಕ ಸುಪ್ರೀಂ ಕೋರ್ಟ್ ಅಂತಿಮ ತೀರ್ಪು ಪ್ರಕಟಿಸಿದೆ.
ಈ ಪ್ರಕರಣದಲ್ಲಿ ಆರೋಪಿಯಾಗಿರುವ ಸಿದ್ಧಾರ್ಥ್ ರೆಡ್ಡಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಮಂಗಳವಾರ (ಫೆಬ್ರವರಿ 12) ವಜಾಗೊಳಿಸಿದ್ದು, 4 ವಾರಗಳಲ್ಲಿ ಪೊಲೀಸರಿಗೆ ಶರಣಾಗುವಂತೆ ಆದೇಶಿಸಿದೆ.
ಇದೇ ವೇಳೆ ಈ ಪ್ರಕರಣದ ಪೋಸ್ಟ್‌ಮಾರ್ಟಂ ಪ್ರಕ್ರಿಯೆಯ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ನ್ಯಾಯಾಲಯ, ಮರಣೋತ್ತರ ಪರೀಕ್ಷೆ ಸರಿಯಾದ ವಿಧಾನದಲ್ಲಿ ನಡೆಸಲಾಗಿಲ್ಲ ಎಂಬ ಅಭಿಪ್ರಾಯವನ್ನು ವ್ಯಕ್ತಪಡಿಸಿದೆ.
ಪ್ರಕರಣ ಸಂಬಂಧ ಈ ಹಿಂದೆ ಹೈಕೋರ್ಟ್ ಆರೋಪಿಗೆ ನೀಡಿದ್ದ ಶಿಕ್ಷೆಯನ್ನು ಇದೀಗ ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿದೆ.
ಪ್ರತ್ಯೂಷಾ ಮತ್ತು ಸಿದ್ಧಾರ್ಥ ರೆಡ್ಡಿ ಹೈದರಾಬಾದ್‌ನಲ್ಲಿ ವಿದ್ಯಾಭ್ಯಾಸ ನಡೆಸುತ್ತಿದ್ದ ವೇಳೆ ಪ್ರೀತಿಯಲ್ಲಿ ಬಿದ್ದಿದ್ದರು. ಬಳಿಕ ಪ್ರತ್ಯುಷಾ ಸಿನಿರಂಗ ಪ್ರವೇಶಿಸಿದರೆ, ಸಿದ್ಧಾರ್ಥ ರೆಡ್ಡಿ ಇಂಜಿನಿಯರಿಂಗ್‌ಗೆ ಸೇರಿದ್ದರು.











