ಉಪ್ಪಿನಂಗಡಿಯಲ್ಲಿ ಝಳಪಿಸಿದ ತಲವಾರ್!!‌ ಪೊಲೀಸರಿಂದ ಇಬ್ಬರ ಬಂಧನ!

ಉಪ್ಪಿನಂಗಡಿ : ಇಲ್ಲಿನ ಶೆಣೈ ರಸ್ತೆಯಲ್ಲಿರುವ ಬಾರ್‌ ಸಮೀಪ ನಡೆದ ಮಾತಿನ ಚಕಮಕಿ ನಡೆದಿದ್ದು, ಈ ವೇಳೆ ತಲವಾರು ಪ್ರದರ್ಶಿಸಿ ಸಾರ್ವಜನಿಕರಲ್ಲಿ ಭೀತಿ ಮೂಡಿಸಿದ ಆರೋಪದ ಮೇಲೆ ಇಬ್ಬರನ್ನು ಉಪ್ಪಿನಂಗಡಿ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದು ಬಂದಿದೆ. ಅ.18ರಂದು ರಾತ್ರಿ ವೇಳೆ ಉಪ್ಪಿನಂಗಡಿ ಪೊಲೀಸ್‌ ಠಾಣಾ ವ್ಯಾಪ್ತಿಯ ಶೆಣೈ ರಸ್ತೆಯಲ್ಲಿರುವ ಬಾರ್‌ ಸಮೀಪ ಮಂಜುನಾಥ್‌, ವಿಶ್ವನಾಥ ಹಾಗೂ ಮತ್ತೋರ್ವ ವ್ಯಕ್ತಿಯ ನಡುವೆ ಮಾತಿನ ಚಕಿಮಕಿ ನಡೆದು ಗಲಾಟೆ ಸಂಭವಿಸಿದೆ. ಈ ವೇಳೆ ಮಂಜುನಾಥ್‌ ಎಂಬಾತ ತನ್ನ ಬಳಿಯಿದ್ದ ತಲವಾರನ್ನು ಸಾರ್ವಜನಿಕವಾಗಿ ಪ್ರದರ್ಶಿಸಿ ಭೀತಿ ಉಂಟುಮಾಡಿದ್ದಾನೆ ಎಂದು ಮೂಲಗಳು ತಿಳಿಸಿವೆ.

Advertisement

ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಉಪ್ಪಿನಂಗಡಿ ಪೊಲೀಸರು ಮಂಜುನಾಥ್‌ ಹಾಗೂ ವಿಶ್ವನಾಥನನ್ನು ವಶಕ್ಕೆ ಪಡೆದಿದ್ದಾರೆ.

Advertisement
Advertisement

Share this article

Subscribe

By pressing the Subscribe button, you confirm that you have read our Privacy Policy.

Latest News

Advertisement

More News

You cannot copy content of this page