ಕಾಕ್ರೋಚ್‌ಗೆ ಅಣ್ಣಾಮಲೈ ಬೆಂಬಲ! ದೆಹಲಿ ಪೊಲೀಸರ ವರ್ತನೆಗೆ ಮಾಜಿ ಪೊಲೀಸ್‌ ಅಧಿಕಾರಿ ಕಳವಳ!!

ಕಾಕ್ರೋಚ್ ಜನತಾ ಪಾರ್ಟಿ ಹೋರಾಟಕ್ಕೆ ತಮಿಳುನಾಡು ಮಾಜಿ ಬಿಜೆಪಿ ಮುಖ್ಯಸ್ಥ, ಮಾಜಿ ಪೊಲೀಸ್ ಅಧಿಕಾರಿ ಕೆ. ಅಣ್ಣಾಮಲೈ ಬೆಂಬಲ ಸೂಚಿಸಿದ್ದಾರೆ. ದೆಹಲಿಯಲ್ಲಿ ಚುನಾವಣಾ ಆಯೋಗ ಮತ್ತು ಎಸ್‌ಐಆರ್ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದ ಸಿಜೆಪಿ ನಾಯಕರನ್ನು ಬಂಧಿಸಿದ ದೆಹಲಿ ಪೊಲೀಸರ ಕ್ರಮವನ್ನು ಅಣ್ಣಾಮಲೈ ಪ್ರಶ್ನಿಸಿದ್ದಾರೆ. ಸಿಜೆಪಿ ನಡೆಸುತ್ತಿರುವ ಪ್ರತಿಭಟನಾ ವಿಧಾನಗಳನ್ನು ಸಂಪೂರ್ಣವಾಗಿ ಒಪ್ಪದಿದ್ದರೂ, ಸರ್ಕಾರದ ಮುಂದೆ ಸಿಜೆಪಿ ಎತ್ತುತ್ತಿರುವ ಸಮಸ್ಯೆಗಳು ಮತ್ತು ಪ್ರಶ್ನೆಗಳನ್ನು ಸಂಪೂರ್ಣವಾಗಿ ಬೆಂಬಲಿಸುತ್ತೇನೆ ಎಂದು ಅಣ್ಣಾಮಲೈ ಹೇಳಿದ್ದಾರೆ ಎಂದು ಮೂಲಗಳು ಹೇಳಿವೆ.

Advertisement

ದೆಹಲಿಯಲ್ಲಿ ಸಿಜೆಪಿ ಸಂಸ್ಥಾಪಕ ಅಭಿಜಿತ್ ದೀಪ್ಕೆ ಮತ್ತು ವಿದ್ಯಾರ್ಥಿ ನಾಯಕರ ಬಂಧನ ಮತ್ತು ದೆಹಲಿ ಪೊಲೀಸರ ವರ್ತನೆಯ ಬಗ್ಗೆ ಅಣ್ಣಾಮಲೈ ಕಳವಳ ವ್ಯಕ್ತಪಡಿಸಿದ್ದಾರೆ. ನಮ್ಮ ದೇಶದ ಕಾನೂನು ಮತ್ತು ಸುವ್ಯವಸ್ಥೆಯ ಪರಿಸ್ಥಿತಿಯ ಬಗ್ಗೆ ನನಗೆ ಸ್ವಲ್ಪ ಭಯ ಮತ್ತು ಚಿಂತೆಯಾಗಿದೆ. ದೆಹಲಿ ಪೊಲೀಸರು ಕಾನೂನನ್ನು ತಮ್ಮ ಕೈಗೆ ತೆಗೆದುಕೊಂಡಿದ್ದಾರೆ ಎಂದು ನನಗೆ ಅನಿಸುತ್ತದೆ ಅಂತ ಅಭಿಪ್ರಾಯಪಟ್ಟಿದ್ದಾರೆ.

Advertisement
Advertisement

ಸಿಜೆಪಿಯ ಪ್ರತಿಭಟನಾ ವಿಧಾನಗಳು ಅಥವಾ ಅವರ ಕೆಲವು ತಂತ್ರಗಳನ್ನು ನಾನು ಸಂಪೂರ್ಣವಾಗಿ ಒಪ್ಪುವುದಿಲ್ಲ. ಆದರೆ ಅವರು ಎತ್ತುತ್ತಿರುವ ಪ್ರಶ್ನೆಗಳಲ್ಲಿ ನಾನು ಸಿಜೆಪಿಯನ್ನು ಸಂಪೂರ್ಣವಾಗಿ ಬೆಂಬಲಿಸುತ್ತೇನೆ ಎಂದು ಅಣ್ಣಾಮಲೈ ಸ್ಪಷ್ಟಪಡಿಸಿದ್ದಾರೆ. ಸಿಜೆಪಿ ಎತ್ತಿರುವ ಆ ಪ್ರಶ್ನೆಗಳಿಗೆ ಉತ್ತರಿಸುವುದು ಕೇಂದ್ರ ಸರ್ಕಾರದ ಜವಾಬ್ದಾರಿ. ಆದರೆ ಕೆಲವು ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ ಅವರನ್ನು ಬಂಧಿಸಿ ನಂತರ ಅವರು ಜೈಲಿನಲ್ಲಿ ತಮ್ಮ ಸಮಯವನ್ನು ಹೇಗೆ ಕಳೆಯುತ್ತಿದ್ದಾರೆ ಎಂಬುದರ ಕುರಿತು ಗದ್ದಲ ಸೃಷ್ಟಿಸುವುದು ಸರಿಯಲ್ಲ ಎಂದಿದ್ದಾರೆ. ಹೀಗೆ ಮಾಡುವುದರಿಂದ ದೆಹಲಿ ಪೊಲೀಸರು ದೇಶ ಮತ್ತು ವ್ಯವಸ್ಥೆಗೆ ದೊಡ್ಡ ಹಾನಿ ಉಂಟುಮಾಡುತ್ತಿದ್ದಾರೆ ಅಣ್ಣಾಮಲೈ ಆರೋಪಿಸಿದ್ದಾರೆ ಎಂದು ಜಾಲತಾಣ ಮೂಲಗಳು ತಿಳಿಸಿವೆ.

Share this article

Subscribe

By pressing the Subscribe button, you confirm that you have read our Privacy Policy.

Latest News

Advertisement

More News

You cannot copy content of this page