ಉಡುಪಿಗೆ ಸಂಚರಿಸುತ್ತಿದ್ದ ಬಸ್‌ನ ಚಾಲಕ ದಿಢೀರ್‌ ಅಸ್ವಸ್ಥ! ಚಾಲಕನ ಸಮಯಪ್ರಜ್ಞೆಯಿಂದ ಉಳಿಯಿತು ಪ್ರಯಾಣಿಕರ ಪ್ರಾಣ!!

ಮಂಗಳೂರಿನಿಂದ ಉಡುಪಿ ಕಡೆಗೆ ಸಂಚರಿಸುತ್ತಿದ್ದ ವಿಜಯಲಕ್ಷ್ಮಿ ಎಕ್ಸ್‌ಪ್ರೆಸ್ ಬಸ್ ಮುಳೂರು ಎಂಬಲ್ಲಿ ಚಾಲಕನಿಗೆ ದಿಢೀರ್ ಅನಾರೋಗ್ಯ ಕಾಣಿಸಿಕೊಂಡ ಪರಿಣಾಮ, ಅಪಘಾತ ಸಂಭವಿಸಿದೆ ಎಂದು ವರದಿಯಾಗಿದೆ.

Advertisement

ಗುರುವಾರ ಮುಳೂರು ತಲುಪಿದ ವೇಳೆ ಚಾಲಕನ ಆರೋಗ್ಯದಲ್ಲಿ ಏಕಾಏಕಿ ವ್ಯತ್ಯಾಸ ಉಂಟಾಗಿದ್ದು, ಬಸ್ ನಿಯಂತ್ರಣ ತಪ್ಪಿ ಎಡಭಾಗಕ್ಕೆ ಚಲಿಸಿದೆ. ಈ ಸಂದರ್ಭದಲ್ಲಿ ಚಾಲಕ ಸಮಯಪ್ರಜ್ಞೆ ಮೆರೆದು ಬಸ್ಸನ್ನು ರಸ್ತೆಬದಿಗೆ ತಿರುಗಿಸಿದ್ದಾರೆ. ಪರಿಣಾಮ, ಬಸ್ ಮೊದಲು ಸಣ್ಣ ಮರವೊಂದಕ್ಕೆ ಢಿಕ್ಕಿ ಹೊಡೆದು, ಬಳಿಕ ಮುಂದೆ ಸಾಗಿದ ದೊಡ್ಡ ಮರವೊಂದಕ್ಕೆ ಢಿಕ್ಕಿ ಹೊಡೆದು ನಿಂತಿದೆ. ಬಸ್ ಸಮೀಪದಲ್ಲೇ ಎರಡು ವಿದ್ಯುತ್ ಕಂಬಗಳಿದ್ದ ಹಿನ್ನೆಲೆಯಲ್ಲಿ, ಅವುಗಳಿಗೆ ಢಿಕ್ಕಿ ಹೊಡೆದಿದ್ದರೆ ಮತ್ತಷ್ಟು ಅಪಾಯ ಸಂಭವಿಸುವ ಸಾಧ್ಯತೆಯಿತ್ತು.

Advertisement
Advertisement

ಆದರೆ, ಚಾಲಕನ ಸಮಯೋಚಿತ ನಿರ್ಧಾರದಿಂದ ಸಂಭವನೀಯ ಭಾರೀ ದುರಂತವೊಂದು ತಪ್ಪಿದಂತಾಗಿದೆ. ಘಟನೆಯಲ್ಲಿ ಬಸ್ಸಿನಲ್ಲಿದ್ದ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ತಿಳಿದುಬಂದಿದೆ.

Share this article

Subscribe

By pressing the Subscribe button, you confirm that you have read our Privacy Policy.

Latest News

Advertisement

More News

You cannot copy content of this page