ರಾಹುಲ್‌ ಗಾಂಧಿ ಅವರ ಬೆಂಗಾವಲು ವಾಹನಗಳ ನಡುವೆ ಸರಣಿ ಅಪಘಾತ! ಅಪಾಯದಿಂದ ಪಾರಾದ ವಿಪಕ್ಷ ನಾಯಕ!!

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ಅವರ ಬೆಂಗಾವಲು ವಾಹನಗಳ ನಡುವೆ ಸರಣಿ ಅಪಘಾತ ಸಂಭವಿಸಿದೆ. ಉತ್ತರ ಪ್ರದೇಶದ ಪೂರ್ವಾಂಚಲ ಎಕ್ಸ್‌ಪ್ರೆಸ್‌ವೇನಲ್ಲಿ ಸರಣಿ ಅಪಘಾತ ಸಂಭವಿಸಿದೆ. ಉತ್ತರ ಪ್ರದೇಶದ ಸುಲ್ತಾನ್‌ಪುರ ಜಿಲ್ಲೆಯ ಹಲಿಯಾಪುರ ಪೊಲೀಸ್ ಠಾಣಾ ವ್ಯಾಪ್ತಿಯ ಕಿಲೋಮೀಟರ್ ಸಂಖ್ಯೆ 91ರ ಬಳಿ ಈ ಭೀಕರ ಅವಘಡ ಸಂಭವಿಸಿದೆ.

Advertisement

ದೆಹಲಿಯಿಂದ ಲಖನೌ ತಲುಪಿದ್ದ ರಾಹುಲ್ ಗಾಂಧಿ ಅವರು ಅಲ್ಲಿಂದ ಸುಲ್ತಾನ್‌ಪುರದ ಎಂಪಿ-ಎಮ್‌ಎಲ್‌ಎ ನ್ಯಾಯಾಲಯದ ವಿಚಾರಣೆಗೆ ಹಾಜರಾಗಲು ರಸ್ತೆ ಮಾರ್ಗವಾಗಿ ತೆರಳುತ್ತಿದ್ದರು. ಈ ವೇಳೆ ಪೂರ್ವಾಂಚಲ ಎಕ್ಸ್‌ಪ್ರೆಸ್‌ವೇನಲ್ಲಿ ವೇಗವಾಗಿ ಚಲಿಸುತ್ತಿದ್ದ ಕಾನ್ವಾಯ್‌ನ ಮುಂಭಾಗದ ವಾಹನವು ಇದ್ದಕ್ಕಿದ್ದಂತೆ ಬ್ರೇಕ್ ಹಾಕಿದೆ. ಪರಿಣಾಮ ಹಿಂದಿನಿಂದ ಬರುತ್ತಿದ್ದ ವಾಹನಗಳು ನಿಯಂತ್ರಣ ತಪ್ಪಿ ಒಂದಕ್ಕೊಂದು ಬಲವಾಗಿ ಡಿಕ್ಕಿಯಾಗಿವೆ. ಸರಣಿ ಡಿಕ್ಕಿಯಲ್ಲಿ ಕಾನ್ವಾಯ್‌ನಲ್ಲಿದ್ದ ಒಟ್ಟು ಐದು ವಾಹನಗಳು ಹಾಗೂ ಒಂದು ಆಂಬುಲೆನ್ಸ್‌ ಜಖಂ ಆಗಿದೆ. ಅಪಘಾತದ ತೀವ್ರತೆಗೆ ವಾಹನಗಳಲ್ಲಿದ್ದ ಕೆಲವು ಕಾಂಗ್ರೆಸ್ ಕಾರ್ಯಕರ್ತರು, ಪಕ್ಷದ ಪದಾಧಿಕಾರಿಗಳು ಹಾಗೂ ಭದ್ರತಾ ಸಿಬ್ಬಂದಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಅದೃಷ್ಟವಶಾತ್ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರು ಯಾವುದೇ ಗಾಯಗಳಿಲ್ಲದೆ ಸಂಪೂರ್ಣ ಸುರಕ್ಷಿತವಾಗಿದ್ದಾರೆ.

Advertisement
Advertisement

Share this article

Subscribe

By pressing the Subscribe button, you confirm that you have read our Privacy Policy.

Latest News

Advertisement

More News

You cannot copy content of this page