ಮುರುಳ್ಯ ರಕ್ತೇಶ್ವರಿ ಸಾನಿಧ್ಯ ಭೂಮಿಯನ್ನು ಮುಸ್ಲಿಂ ದಫನ ಭೂಮಿ ಮಾಡಲು ಬಿಡಲ್ಲ! ಹೋರಾಟಕ್ಕೆ ಸುಳ್ಯ ಬಿಜೆಪಿ ಬೆಂಬಲ!

ಸುಳ್ಯ : ರಕ್ತೇಶ್ವರಿ ದೇವಿಯ ಸಾನಿಧ್ಯವುಳ್ಳ ಹಿಂದೂಗಳ ಕೃಷಿ ಭೂಮಿಯನ್ನು ವಕ್ಫ್ ಬೋರ್ಡ್ ಅಕ್ರಮವಾಗಿ ಮುಸ್ಲಿಂ ದಫನ ಭೂಮಿಯನ್ನಾಗಿ ಕಾಯ್ದಿರಿಸಿ ಹೊರಡಿಸಿರುವ ಆದೇಶದ ವಿರುದ್ಧ ಹಿಂದೂ ಹಿತರಕ್ಷಣಾ ವೇದಿಕೆ, ಮುರುಳ್ಯ ವತಿಯಿಂದ ಹಮ್ಮಿಕೊಳ್ಳಲಾಗಿರುವ ಬೃಹತ್ ಪ್ರತಿಭಟನಾ ಸಭೆಗೆ ಸುಳ್ಯ ಬಿಜೆಪಿ ಸಂಪೂರ್ಣ ಬೆಂಬಲ ನೀಡಲಿದೆ ಎಂದು ಮಂಡಲ ಅಧ್ಯಕ್ಷ ವೆಂಕಟ್ ವಳಲಂಬೆ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

Advertisement

ಈ ಭೂಮಿಯು ನೂರಾರು ವರ್ಷಗಳಿಂದ ಹಿಂದೂಗಳು ಕೃಷಿ ಮಾಡಿಕೊಂಡು ಬಂದಿರುವ ಭೂಮಿಯಾಗಿದ್ದು, ರಕೇಶ್ವರಿ ದೇವಸ್ಥಾನದ ಸಮೀಪದಲ್ಲಿದೆ. ಯಾವುದೇ ದಾಖಲೆ, ವಿಚಾರಣೆ ಇಲ್ಲದೆ ಏಕಾಏಕಿ ವಕ್ಫ್ ಬೋರ್ಡ್ ತನ್ನ ಆಸ್ತಿ ಎಂದು ಘೋಷಿಸಿರುವುದು ಖಂಡನೀಯವಾಗಿದ್ದು, ಇದು ಹಿಂದೂ ಸಮಾಜದ ಮೇಲೆ ನಡೆದ ಅನ್ಯಾಯವಾಗಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Advertisement
Advertisement

ಈ ಅನ್ಯಾಯದ ಆದೇಶವನ್ನು ಕೂಡಲೇ ರದ್ದುಗೊಳಿಸಬೇಕೆಂದು ಒತ್ತಾಯಿಸಿ ದಿನಾಂಕ: 28-10-2026, ಬುಧವಾರ ಬೆಳಿಗ್ಗೆ 10:00 ಗಂಟೆಗೆ ಮುರುಳ್ಯದಲ್ಲಿ ನಡೆಯಲಿರುವ ಪ್ರತಿಭಟನಾ ಸಭೆಯಲ್ಲಿ ಎಲ್ಲಾ ಹಿಂದೂ ಬಾಂಧವರು, ಬಿಜೆಪಿ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ವೆಂಕಟ್ ವಳಲಂಬೆ ಕರೆ ನೀಡಿದ್ದಾರೆ.

Share this article

Subscribe

By pressing the Subscribe button, you confirm that you have read our Privacy Policy.

Latest News

Advertisement

More News

You cannot copy content of this page