ಬೆಂಗಳೂರಿನ ಹುಲಿಮಂಗಲಾ ಹೆಬ್ಬಗೋಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಕ್ರಮ ಬಾಂಗ್ಲಾ ನುಸುಳುಕೊರರನ್ನು ಪ್ರಶ್ನಿಸಲು ಹೋದ ಹಿಂದೂ ಕಾರ್ಯಕರ್ತರ ಮೇಲೆ ಸ್ಥಳಿಯ ಮುಸ್ಲಿಮರ ಸಹಕರದಿಂದ ನಮ್ಮದೇ ನೆಲದಲ್ಲಿ ನಿಂತು ನುಸುಳು ಕೊರರು ಬಾಟ್ಲಿ ಕಲ್ಲು ಗಳಿಂದ ಹಿಂದೂ ಕಾರ್ಯಕರ್ತರ ಮೇಲೆ ದಾಳಿ ನಡೆಸಿದ್ದು ಈ ಘೋರ ಕೃತ್ಯದ ಬಗ್ಗೆ ಹಿಂದು ಜಾಗರಣ ವೇದಿಕೆ ಖಂಡನೆ ವ್ಯಕ್ತಪಡಿಸುತ್ತಾ ಹೆಬ್ಬಗೋಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದೆ.
ಹಿಂದೂ ಜಾಗರಣ ವೇದಿಕೆ ಪ್ರಕಟಣೆಯಲ್ಲಿ ತಿಳಿಸಿದಂತೆ ದಿನಾಂಕ: 28-10-2026 ರಂದು ಸಂಜೆ ಸುಮಾರು 4:30 ಗಂಟೆಗೆ, ಎಲೆಕ್ಟ್ರಾನಿಕ್ ಸಿಟಿ ಸಮೀಪದ ಹುಲಿಮಂಗಲ ನೀಲಾದ್ರಿ ರಸ್ತೆಯ ಬಳಿ ಕೆಲವರು ಶೆಡ್‌ಗಳಲ್ಲಿ ವಾಸವಾಗಿರುವುದನ್ನು ಗಮನಿಸಿದ ಸ್ಥಳೀಯ ಗ್ರಾಮಸ್ಥರು, ಅವರ ಗುರುತು ಹಾಗೂ ದಾಖಲೆಗಳ ಬಗ್ಗೆ ಅನುಮಾನ ವ್ಯಕ್ತಪಡಿಸಿ ವಿಚಾರಿಸಲು ತೆರಳಿದ ಸಂದರ್ಭದಲ್ಲಿ, ಅವರ ಮೇಲೆ ಸುಮಾರು 50ರಿಂದ 60 ಜನ ಸೇರಿ ಮಾರಣಾಂತಿಕ ಹಲ್ಲೆ ನಡೆಸಲಾಗಿದೆ ಎಂಬ ಘಟನೆ ಬೆಳಕಿಗೆ ಬಂದಿದೆ. ಪ್ರಸ್ತುತ ದೇಶದ ವಿವಿಧ ಭಾಗಗಳಲ್ಲಿ, ವಿಶೇಷವಾಗಿ ಕರ್ನಾಟಕದಲ್ಲಿ, ಅಕ್ರಮ ವಲಸೆಯ ಕುರಿತು ಗಂಭೀರ ಚರ್ಚೆಗಳು ನಡೆಯುತ್ತಿವೆ. ಈ ಹಿನ್ನೆಲೆಯಲ್ಲಿ, ಸಂಬಂಧಪಟ್ಟ ವ್ಯಕ್ತಿಗಳ ಗುರುತು ಹಾಗೂ ದಾಖಲೆಗಳ ಬಗ್ಗೆ ಕಾನೂನುಬದ್ಧವಾಗಿ ಪರಿಶೀಲನೆ ನಡೆಸುವಂತೆ ಸಂಬಂಧಪಟ್ಟ ಅಧಿಕಾರಿಗಳನ್ನು ಒತ್ತಾಯಿಸುತ್ತೇವೆ.
ಆದರೆ, ಈ ಘಟನೆಯ ಕುರಿತು ಸಂಪೂರ್ಣ ತನಿಖೆ ನಡೆಸಿ ಸತ್ಯಾಸತ್ಯತೆಯನ್ನು ದೃಢಪಡಿಸುವುದು ಅಗತ್ಯವಾಗಿದೆ. ಆದ್ದರಿಂದ, ಹಿಂದೂ ಜಾಗರಣ ವೇದಿಕೆಯ ವತಿಯಿಂದ ಸಂಬಂಧಪಟ್ಟ ಅಧಿಕಾರಿಗಳಿಗೆ ಈ ಕೆಳಗಿನ ಬೇಡಿಕೆಗಳನ್ನು ಸಲ್ಲಿಸುತ್ತೇವೆ. ಘಟನೆಗೆ ಸಂಬಂಧಿಸಿದಂತೆ ನಿಷ್ಪಕ್ಷಪಾತ ತನಿಖೆ ನಡೆಸಬೇಕು. ಹಲ್ಲೆ ನಡೆಸಿರುವುದು ದೃಢಪಟ್ಟ ವ್ಯಕ್ತಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು. ಹಲ್ಲೆಗೊಳಗಾದ ಸ್ಥಳೀಯರಿಗೆ ಅಗತ್ಯ ಪೊಲೀಸ್ ರಕ್ಷಣೆ ಒದಗಿಸಬೇಕು. ಸಂಬಂಧಪಟ್ಟ ವ್ಯಕ್ತಿಗಳ ಗುರುತು ಮತ್ತು ದಾಖಲೆಗಳನ್ನು ಕಾನೂನುಬದ್ಧವಾಗಿ ಪರಿಶೀಲಿಸಬೇಕು. ಇಂತಹ ಘಟನೆಗಳು ಮರುಕಳಿಸದಂತೆ ಸೂಕ್ತ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು. ನಮ್ಮ ಬೇಡಿಕೆಗಳನ್ನು ಗಂಭೀರವಾಗಿ ಪರಿಗಣಿಸಿ ಶೀಘ್ರ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸುತ್ತೇವೆ. ಸೂಕ್ತ ಕ್ರಮ ಕೈಗೊಳ್ಳದಿದ್ದಲ್ಲಿ, ಪ್ರಜಾಪ್ರಭುತ್ವದ ಹಾಗೂ ಕಾನೂನುಬದ್ಧ ಮಾರ್ಗದಲ್ಲಿ ಹೋರಾಟ ನಡೆಸಬೇಕಾಗುತ್ತದೆ ಎಂದು ಈ ಮೂಲಕ ಎಚ್ಚರಿಸುತ್ತೇವೆ ಎಂದು ತಿಳಿಸಿದೆ.













