ನವೆಂಬರ್‌ನಲ್ಲಿ ರಾಜ್ಯಾದ್ಯಂತ ಅರಾಜಕತೆ ಹಟಾವೋ!! ವಿ. ಸುನಿಲ್‌ ಕುಮಾರ್‌ ಮಹತ್ವದ ಸುದ್ದಿಗೋಷ್ಠಿ!!

ಚಿಕ್ಕಮಗಳೂರು: ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯ ಕುರಿತು ಕಾಂಗ್ರೆಸ್ ಜನರಲ್ಲಿ ಗೊಂದಲ ಮೂಡಿಸುವ ಹಾಗೂ ಸುಳ್ಳು ಸುದ್ದಿಗಳ ಮೂಲಕ ದೇಶದಲ್ಲಿ ಅರಾಜಕತೆ ಸೃಷ್ಟಿಸಲು ಪ್ರಯತ್ನಿಸುತ್ತಿದೆ ಎಂದು ಬಿಜೆಪಿ ಕರ್ನಾಟಕ ರಾಜ್ಯ ಪ್ರಧಾನ ಕಾರ್ಯದರ್ಶಿ ವಿ. ಸುನಿಲ್ ಕುಮಾರ್ ಆರೋಪಿಸಿದರು.

Advertisement

ನಗರದ ಪ್ರೆಸ್ ಕ್ಲಬ್‌ನಲ್ಲಿ ಗುರುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್‌ನ ಈ ಧೋರಣೆಯನ್ನು ಖಂಡಿಸಿ ನವೆಂಬರ್ 1ರಿಂದ 30ರವರೆಗೆ ರಾಜ್ಯಾದ್ಯಂತ ‘ಅರಾಜಕತೆ ಹಟಾವೋ’ ಅಭಿಯಾನ ಹಮ್ಮಿಕೊಳ್ಳಲು ಬಿಜೆಪಿ ನಿರ್ಧರಿಸಿದೆ ಎಂದು ತಿಳಿಸಿದರು.

Advertisement
Advertisement

ಸ್ವಾತಂತ್ರ್ಯಾ ನಂತರ ದೇಶದಲ್ಲಿ 12 ಬಾರಿ ಎಸ್ಐಆರ್ ಪ್ರಕ್ರಿಯೆ ನಡೆದಿದ್ದು, ಈ ಅವಧಿಯಲ್ಲಿ ಹಲವು ಬಾರಿ ಕಾಂಗ್ರೆಸ್ ಅಧಿಕಾರದಲ್ಲಿತ್ತು. ಮತದಾರರ ಪಟ್ಟಿಯ ಪರಿಷ್ಕರಣೆ ಚುನಾವಣಾ ಆಯೋಗದ ನಿರಂತರ ಹಾಗೂ ಸಾಂವಿಧಾನಿಕ ಪ್ರಕ್ರಿಯೆಯಾಗಿದೆ. ಆದರೂ ಕಾಂಗ್ರೆಸ್, ಎಸ್ಐಆರ್ ಪ್ರಕ್ರಿಯೆಯನ್ನು ರಾಜಕೀಯ ವಿವಾದವನ್ನಾಗಿ ಮಾಡುತ್ತಿದೆ ಎಂದು ಟೀಕಿಸಿದರು. ಎಸ್ಐಆರ್ ಪ್ರಕ್ರಿಯೆ ಆರಂಭಕ್ಕೂ ಮುನ್ನ ಚುನಾವಣಾಧಿಕಾರಿಗಳು ರಾಜ್ಯಮಟ್ಟದಿಂದ ತಾಲೂಕು ಮಟ್ಟದವರೆಗೆ ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳೊಂದಿಗೆ ಹಲವು ಸುತ್ತಿನ ಚರ್ಚೆ ನಡೆಸಿದ್ದಾರೆ. ಆಗ ಆಕ್ಷೇಪ ವ್ಯಕ್ತಪಡಿಸದ ಕಾಂಗ್ರೆಸ್, ಇದೀಗ ಜನರಲ್ಲಿ ಗೊಂದಲ ಮೂಡಿಸುವ ರೀತಿಯಲ್ಲಿ ಹೋರಾಟ ನಡೆಸುತ್ತಿರುವುದು ಹಾಸ್ಯಾಸ್ಪದ ಎಂದು ಹೇಳಿದರು.

Share this article

Subscribe

By pressing the Subscribe button, you confirm that you have read our Privacy Policy.

Latest News

Advertisement

More News

You cannot copy content of this page