ಧರ್ಮಸ್ಥಳ ಸೌಜನ್ಯ ಪ್ರಕರಣದಲ್ಲಿ ಬಿಗ್‌ ಅಪ್ಡೇಟ್!! ಎಸ್‌ಐಟಿ ಮುಖ್ಯಸ್ಥರಾಗಿ ಐಪಿಎಸ್ ಅಧಿಕಾರಿ ಚೇತನ್‌ಸಿಂಗ್‌ ರಾಥೋಡ್ ನೇಮಕ!

ಧರ್ಮಸ್ಥಳ : ಇಲ್ಲಿನ ಪಾಂಗಳದ ಕು. ಸೌಜನ್ಯ ಅವರ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರು ತನಿಖೆಗೆ ರಾಜ್ಯ ಸರಕಾರ ರಚಿಸಿರುವ ವಿಶೇಷ ತನಿಖಾ ತಂಡದ ಮುಖ್ಯಸ್ಥರಾಗಿ ಹಿರಿಯ ಐಪಿಎಸ್ ಅಧಿಕಾರಿ ಚೇತನ್‌ಸಿಂಗ್‌ ರಾಥೋಡ್ ನೇಮಕಗೊಂಡಿದ್ದಾರೆ ಎಂದು ತಿಳಿದು ಬಂದಿದೆ.

Advertisement

ಹಿರಿಯ ಐಪಿಎಸ್ ಅಧಿಕಾರಿ ಎನ್. ಶಶಿಕುಮಾರ್ ಅವರು ಎಸ್‌ಐಟಿಯಿಂದ ಹಿಂದೆ ಸರಿದ ಕಾರಣ ನೂತನ ಮುಖ್ಯಸ್ಥರಾಗಿ ಸಿಐಡಿಯ ಐಜಿಪಿ ಚೇತನ್‌ಸಿಂಗ್ ರಾಥೋಡ್ ಅವರನ್ನು ನೇಮಕ ಮಾಡಲಾಗಿದೆ. ಎಸ್‌ಐಟಿ ಸದಸ್ಯರಾಗಿದ್ದ ಎನ್‌ಕೌಂಟರ್ ಸ್ಪೆಷಲಿಸ್ಟ್ ವೆಂಕಟೇಶ್ ಪ್ರಸನ್ನ ಅವರು ಎಸ್‌ಐಟಿಯಿಂದ ಹಿಂದೆ ಸರಿದಿರುವುದರಿಂದ ಅವರ ಸ್ಥಾನಕ್ಕೆ ಹಾಸನ ಜಿಲ್ಲೆಯ ಎಎಸ್ಸಿ ಶ್ರೀನಿಧಿ ನೇಮಕಗೊಂಡಿದ್ದಾರೆ ಎಂದು ವರದಿ ತಿಳಿಸಿದೆ.

Advertisement
Advertisement

Share this article

Subscribe

By pressing the Subscribe button, you confirm that you have read our Privacy Policy.

Latest News

Advertisement

More News

You cannot copy content of this page