ಬದರಿನಾಥ್ನಿಂದ ಫಾಟಾ ಕಡೆಗೆ ಪ್ರಯಾಣಿಸುತ್ತಿದ್ದ ಟ್ರಾನ್ಸ್ ಭಾರತ್ ಏವಿಯೇಷನ್ ಸಂಸ್ಥೆಗೆ ಸೇರಿದ ಹೆಲಿಕಾಪ್ಟರ್ ಚಮೋಲಿ ಜಿಲ್ಲೆಯ ಜೋಶಿಮಠ ಸಮೀಪ ನಾಪತ್ತೆಯಾಗಿದ್ದು, ಪತನಗೊಂಡಿರುವ ಶಂಕೆ ವ್ಯಕ್ತವಾಗಿದೆ. ಹೆಲಿಕಾಪ್ಟರ್ನಲ್ಲಿದ್ದ ಪೈಲಟ್ ಸೇರಿದಂತೆ ಆರು ಮಂದಿ ನಾಪತ್ತೆಯಾಗಿದ್ದು, ವಿಮಾನದ ಅವಶೇಷಗಳು ಇನ್ನೂ ಪತ್ತೆಯಾಗಿಲ್ಲ. ಪ್ರಾಥಮಿಕ ಮಾಹಿತಿಯ ಪ್ರಕಾರ, ಜೋಶಿಮಠ ಪ್ರದೇಶದ ಹಾಥಿ ಪಹಾಡ್ ಹಿಂಭಾಗದಲ್ಲಿರುವ ಚಾಯಿ ಗ್ರಾಮದ ಬಳಿ ಹೆಲಿಕಾಪ್ಟರ್ ಪತನಗೊಂಡಿರಬಹುದು ಎಂದು ಶಂಕಿಸಲಾಗಿದೆ. ನಾಪತ್ತೆಯಾಗಿರುವ ಹೆಲಿಕಾಪ್ಟರ್ ಹಾಗೂ ಅದರ ಭಾಗಗಳನ್ನು ಪತ್ತೆ ಹಚ್ಚಲು ಹೆಚ್ಚುವರಿಯಾಗಿ ಮತ್ತೂರೆಡು ಹೆಲಿಕಾಪ್ಟರ್ಗಳನ್ನು ಶೋಧ ಕಾರ್ಯಾಚರಣೆಗೆ ನಿಯೋಜಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಪ್ರದೇಶದಲ್ಲಿ ನಿರಂತರ ಮಳೆ ಮತ್ತು ದಟ್ಟ ಮೋಡ ಕವಿದ ವಾತಾವರಣ ಇರುವುದರಿಂದ ಶೋಧ ತಂಡಗಳಿಗೆ ಹೆಲಿಕಾಪ್ಟರ್ನ ನಿಖರ ಸ್ಥಳವನ್ನು ಪತ್ತೆಹಚ್ಚಲು ಸಾಧ್ಯವಾಗುತ್ತಿಲ್ಲ.















