ಅಕ್ಟೋಬರ್ ತಿಂಗಳಿನಲ್ಲಿ ದೇಶದಲ್ಲಿ 15,976 ಕೋಟಿ ಯೂನಿಟ್ ವಿದ್ಯುತ್ ಬಳಕೆ ಆಗಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ. ಕಳೆದ ವರ್ಷದ ಅಕ್ಟೋಬರ್‌ನಲ್ಲಿ 13,107 ಕೋಟಿ ಯೂನಿಟ್‌ನಷ್ಟು ವಿದ್ಯುತ್ ಬಳಕೆ ಆಗಿತ್ತು. ಇದಕ್ಕೆ ಹೋಲಿಸಿದರೆ ವಿದ್ಯುತ್ ಬಳಕೆ ಪ್ರಮಾಣವು ಶೇ 21.88ರಷ್ಟು ಹೆಚ್ಚಳವಾಗಿದೆ ಎಂದು ತಿಳಿಸಿದ್ದಾಗಿ ಮೂಲಗಳು ಹೇಳಿವೆ.
ಹಬ್ಬದ ಋತು ಅಂಗವಾಗಿ ವಾಣಿಜ್ಯ ಘಟಕಗಳಲ್ಲಿ ಮತ್ತು ಕೈಗಾರಿಕೆಗಳಲ್ಲಿ ವಿದ್ಯುತ್ ಬೇಡಿಕೆ ಹೆಚ್ಚಿದೆ. ಜೊತೆಗೆ ದೇಶದ ಹಲವು ಭಾಗಗಳಲ್ಲಿ ನಿರಂತರವಾಗಿ ಹವಾನಿಯಂತ್ರಕಗಳನ್ನು ಬಳಸಲಾಗುತ್ತಿದೆ. ಇದು ವಿದ್ಯುತ್ ಬಳಕೆ ಹೆಚ್ಚಳಕ್ಕೆ ಕಾರಣ ಎಂದು ತಜ್ಞರು ತಿಳಿಸಿದ್ದಾರೆ. ಕಳೆದ ವರ್ಷ ಅಕ್ಟೋಬರ್‌ನಲ್ಲಿ ವಿದ್ಯುತ್ ಬೇಡಿಕೆ 210.82 ಗಿಗಾವಾಟ್‌ನಷ್ಟಿತ್ತು. ಇದು ಈ ಬಾರಿ 260.73 ಗಿಗಾವಾಟ್‌ಗೆ ಹೆಚ್ಚಳವಾಗಿದೆ ಎಂದು ತಿಳಿದು ಬಂದಿದೆ.












