ಹಾಸನದ ಅಧಿದೇವತೆ ಹಾಸನಾಂಬೆ ದರುಶನಕ್ಕೆ ಭಕ್ತಸಾಗರವೇ ಹರಿದುಬರುತ್ತಿದೆ. ದೇವಾಲಯದ ಬಾಗಿಲು ತೆರೆದ ನಾಲ್ಕು ದಿನಗಳಲ್ಲೇ ಎಂಟು ಲಕ್ಷಕ್ಕೂ ಅಧಿಕ ಭಕ್ತರು ತಾಯಿಯ ದರ್ಶನ ಪಡೆದಿದ್ದು, ಟಿಕೆಟ್ ಹಾಗೂ ಲಡ್ಡು ಮಾರಾಟದಿಂದ 6.5 ಕೋಟಿ ಆದಾಯ ಸಂಗ್ರಹವಾಗಿದೆ ಎಂದು ಮೂಲಗಳು ತಿಳಿಸಿವೆ.
ನವೆಂಬರ್ 11ರವರೆಗೆ ದರ್ಶನಕ್ಕೆ ಅವಕಾಶ ಇರುವ ಹಿನ್ನೆಲೆಯಲ್ಲಿ ಭಕ್ತರ ಸಂಖ್ಯೆ ಮತ್ತಷ್ಟು ಹೆಚ್ಚುವ ನಿರೀಕ್ಷೆಯಿದೆ. ಈ ಮೂಲಕ ಹಾಸನಾಂಬೆ ದರ್ಶನ ಮತ್ತು ಆದಾಯ ಸಂಗ್ರಹ ಎರಡರಲ್ಲೂ ಹೊಸ ದಾಖಲೆ ನಿರ್ಮಾಣವಾಗಿದೆ ಎನ್ನಲಾಗಿದೆ.
ಹಾಸನಾಂಬೆ ದರುಶನಕ್ಕೆ ದಿನದಿಂದ ದಿನಕ್ಕೆ ಭಕ್ತರ ಸಂಖ್ಯೆ ಹೆಚ್ಚುತ್ತಿದೆ. ಕಳೆದ ನಾಲ್ಕು ದಿನಗಳಲ್ಲಿ ಎಂಟು ಲಕ್ಷಕ್ಕೂ ಅಧಿಕ ಭಕ್ತರು ದೇವಿಯ ದರುಶನ ಪಡೆದಿದ್ದಾರೆ. ದರುಶನಕ್ಕಾಗಿ ಗಂಟೆಗಟ್ಟಲೆ ಕಾಯುತ್ತಿದ್ದರೂ ಭಕ್ತರ ಉತ್ಸಾಹ ಮಾತ್ರ ಕಡಿಮೆಯಾಗಿಲ್ಲ ಎಂದು ವರದಿಯಾಗಿದೆ.















