ಬೆಂಗಳೂರು : ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ, ಕರ್ನಾಟಕ ರಾಜ್ಯದ ಭಾಜಪಾ ನೂತನ ಉಸ್ತುವಾರಿ ಹರೀಶ್ ಚಂದ್ರ ದ್ವಿವೇದಿಯವರನ್ನು ಬೆಂಗಳೂರಿನಲ್ಲಿರುವ ಪಕ್ಷದ ಕೇಂದ್ರ ಕಾರ್ಯಾಲಯದಲ್ಲಿ ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಅವರು ಆತ್ಮೀಯವಾಗಿ ಬರಮಾಡಿಕೊಂಡರು ಎಂದು ತಿಳಿದು ಬಂದಿದೆ.
ಈ ಸಂದರ್ಭದಲ್ಲಿ ವಿಪಕ್ಷ ನಾಯಕ ಆರ್. ಅಶೋಕ್, ಕೇಂದ್ರ ಸಚಿವ ಸದಾನಂದ ಗೌಡ, ಎಂಎಲ್ಸಿ ಸಿ.ಟಿ. ರವಿ ಸಹಿತ ಪಕ್ಷದ ಹಲವಾರು ಪ್ರಮುಖರು ಉಪಸ್ಥಿತರಿದ್ದರು.















