ಪುತ್ತೂರು : ಮಯೂರ ಇನ್ಲ್ಯಾಂಡ್ ಸಂಕೀರ್ಣದಲ್ಲಿ ದಕ್ಷಿಣ ಕನ್ನಡ ಮ್ಯೂಚುವಲ್ ಬೆನಿಫಿಟ್ ನಿಧಿಯ ವತಿಯಿಂದ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು.
ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಉಮೇಶ್ ನಾಯಕ್ ಮಾತನಾಡಿ, ವ್ಯವಹಾರ ಮಾಡುವುದು ಎಲ್ಲರೂ ಮಾಡುತ್ತಾರೆ. ಆದರೆ, ವ್ಯವಹಾರದ ಜೊತೆಗೆ ರಾಷ್ಟ್ರೀಯ ಹಬ್ಬಗಳನ್ನು ಆಚರಿಸುವುದು, ಸಾಮಾಜಿಕ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವುದು ವಿಶೇಷವಾದ ಕಾರ್ಯವಾಗಿದೆ ಎಂದರು.ಹಣಕಾಸಿನ ವ್ಯವಹಾರದಲ್ಲಿ ಪಾರದರ್ಶಕತೆ ಕಾಪಾಡುವುದರ ಜೊತೆಗೆ ವೇದಿಕೆಯ ಘನತೆಯನ್ನು ಹೆಚ್ಚಿಸುವಂತಹ ಕಾರ್ಯಗಳನ್ನು ಸಂಸ್ಥೆ ಮಾಡುತ್ತಿದೆ. ಗ್ರಾಹಕರನ್ನು ದೇವರಂತೆ ಕಾಣುವ ಮನೋಭಾವ ಎಲ್ಲ ಸಂಸ್ಥೆಗಳಲ್ಲೂ ಇರಬೇಕು. ಆದರೇ ಕೆಲವೆಡೆ ಗ್ರಾಹಕರು ಅಪಮಾನವನ್ನು ಸಹಿಸಿಕೊಳ್ಳಬೇಕಾದ ಪರಿಸ್ಥಿತಿ ಇರುತ್ತದೆ. ಆದರೆ, ದಕ್ಷಿಣ ಕನ್ನಡ ಮ್ಯೂಚುವಲ್ ಬೆನಿಫಿಟ್ ನಿಧಿಯು ಎಲ್ಲ ಗ್ರಾಹಕರೊಂದಿಗೆ ಪ್ರೀತಿಯಿಂದ ವ್ಯವಹರಿಸುತ್ತಿರುವುದು ಶ್ಲಾಘನೀಯವೆಂದರು.
ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಮನ್ಮಥ ಶೆಟ್ಟಿ ಮಾತನಾಡಿ, ಕನ್ನಡ ಭಾಷೆಯ ಮೇಲಿನ ಅಭಿಮಾನವನ್ನು ಪ್ರತಿಯೊಬ್ಬರೂ ತಮ್ಮ ಕಾರ್ಯಗಳ ಮೂಲಕ ತೋರಿಸಬೇಕು. ಕನ್ನಡ ರಾಜ್ಯೋತ್ಸವವನ್ನು ನವೆಂಬರ್ 1ರಂದು ಆಚರಿಸಲಾಗುತ್ತದೆ. ಅದೇ ರೀತಿ ಸೆಪ್ಟೆಂಬರ್ 18 ರಂದು ತುಳು ಭಾಷಾ ದಿನಚರಣೆ ನಡೆಸುವ ಕುರಿತು ಉಸ್ತುವಾರಿ ಸಚಿವರು ಘೋಷಿಸಿರುವುದು ಸಂತಸದ ವಿಚಾರವೆಂದ ಅವರು, ದಕ್ಷಿಣ ಕನ್ನಡ ಮ್ಯೂಚುಯಲ್ ಬೆನಿಫಿಟ್ ನಿಧಿ ಇನ್ನಷ್ಟು ಅಭಿವೃದ್ಧಿಯ ಪಥದಲ್ಲಿ ಸಾಗಲಿ. ವಸ್ತುನಿಷ್ಠ ಚಿಂತನೆ ಹಾಗೂ ಜನಪರ ಕಾಳಜಿಯೊಂದಿಗೆ ಸಂಸ್ಥೆ ಬೆಳೆಯಲಿ ಎಂದು ಹಾರೈಸಿದರು.
ಗೌರವ ಉಪಸ್ಥಿತರಿದ್ದ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ವೇದನಾಥ ಸುವರ್ಣ ದೀಪ ಪ್ರಜ್ವಲನೆ ಮೂಲಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಕನ್ನಡ ರಾಜ್ಯೋತ್ಸವದಂತಹ ಕಾರ್ಯಕ್ರಮವನ್ನು ಆಯೋಜಿಸಿರುವುದು ಅಭಿನಂದನೀಯ. ನಮ್ಮ ಜಿಲ್ಲೆಯಲ್ಲಿ ಅತೀ ಹೆಚ್ಚು ಬ್ಯಾಂಕ್ಗಳು ಜೊತೆಗೆ ವಿದ್ಯಾವಂತರು ಹಾಗೂ ದೇವಾಲಯಗಳು ಹೆಚ್ಚಿನ ಸಂಖ್ಯೆಯಲ್ಲಿದ್ದು, ಇದರಿಂದ ಯುವಜನತೆಗೆ ಉದ್ಯೋಗ ಲಭಿಸುತ್ತವೆ. ಮುಂದಿನ ದಿನಗಳಲ್ಲಿ ಸಂಸ್ಥೆಯು ಇನ್ನಷ್ಟು ಶಾಖೆಗಳನ್ನು ತೆರೆದು ಅಭಿವೃದ್ಧಿಯ ಪಥದಲ್ಲಿ ಮುನ್ನಡೆಯಲಿ ಎಂದು ಶುಭ ಹಾರೈಸಿದರು.
ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ವೇದನಾಥ ಸುವರ್ಣ ಅವರನ್ನು ಸನ್ಮಾನಿಸಲಾಯಿತು. ವೇದಿಕೆಯಲ್ಲಿದ್ದ ಗಣ್ಯ ಅತಿಥಿಗಳಿಗೆ ಕನ್ನಡ ಬಾವುಟ, ಬಣ್ಣದ ಶಾಲು ನೀಡಿ ದ.ಕ. ಮ್ಯೂಚುವಲ್ ಬೆನಿಫಿಟ್ ನಿಧಿಲಿ ಇದರ ಅಂಗಸಂಸ್ಥೆ ದ.ಕ. ಬೆಳೆಗಾರರ ಸಾವಯವ ಸಂಯುಕ್ತ ರೈತ ಉತ್ಪಾದಕ ಕಂ. ವಿಟ್ಲ ಶಾಖಾ ವ್ಯವಸ್ಥಾಪಕ ಚೇತನ್ ಕುಮಾರ್ ಗೌರವಿಸಿದರು. ಈ ವೇಳೆ ಸಂಸ್ಥೆಯ ಗ್ರಾಹಕರು ಮತ್ತು ಹಿತೈಷಿಗಳು ಇದ್ದರು.
ಜ್ಯೋತಿಕಿರಣ ಅವರು ಪ್ರಾರ್ಥನೆ ನೆರವೇರಿಸಿದರು. ಶಾಖಾ ಅಧ್ಯಕ್ಷ ಪುನೀತ್ ವಿಜೆ ವಂದಿಸಿದರು. ಸಂಸ್ಥೆಯ ಸಿಬ್ಬಂದಿ ತಂಡ ವಿವಿಧ ಕಾರ್ಯನಿರ್ವಹಿಸಿ, ಸಹಕಾರ ನೀಡಿತು.















