ಬೆಂಗಳೂರಿನ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿ. ವತಿಯಿಂದ ನೀಡಲಾಗುವ ಪ್ರತಿಷ್ಠಿತ ʼರಾಜ್ಯ ಸಹಕಾರಿ ರತ್ನʼ ಪ್ರಶಸ್ತಿಗೆ ವಿಟ್ಲ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ, ಕಲ್ಲಡ್ಕ ರೈತರ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಕೆ. ಪದ್ಮನಾಭ ಕೊಟ್ಟಾರಿ ಅವರು ಆಯ್ಕೆಯಾಗಿದ್ದಾರೆ. ಸಹಕಾರ ಕ್ಷೇತ್ರದಲ್ಲಿ ಸಲ್ಲಿಸಿರುವ ಗಣನೀಯ ಸೇವೆ ಹಾಗೂ ಸಹಕಾರಿ ಸಂಸ್ಥೆಗಳ ಮೂಲಕ ಜನಸಾಮಾನ್ಯರಿಗೆ ನೀಡಿರುವ ಕೊಡುಗೆಯನ್ನು ಪರಿಗಣಿಸಿ ಅವರನ್ನು ಈ ರಾಜ್ಯಮಟ್ಟದ ಗೌರವಕ್ಕೆ ಆಯ್ಕೆ ಮಾಡಲಾಗಿದೆ ಎಂದು ತಿಳಿದು ಬಂದಿದೆ.
ನ. 14ರಂದು ಬೆಂಗಳೂರಿನಲ್ಲಿ ನಡೆಯಲಿರುವ ರಾಜ್ಯಮಟ್ಟದ ಸಹಕಾರಿ ಸಪ್ತಾಹ ಸಮಾರಂಭದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ರವರು ಕೆ. ಪದ್ಮನಾಭ ಕೊಟ್ಟಾರಿ ರವರಿಗೆ ʼರಾಜ್ಯ ಸಹಕಾರಿ ರತ್ನʼ ಪ್ರಶಸ್ತಿ ನೀಡಿ ಗೌರವಿಸಲಿದ್ದಾರೆ.














