ಬೆಳ್ತಂಗಡಿ : ಧರ್ಮಸ್ಥಳ ಕ್ಷೇತ್ರದ ಬಗ್ಗೆ ಷಡ್ಯಂತ್ರ ಆರೋಪಕ್ಕೆ ಸಂಬಂಧಿಸಿದಂತೆ ಸಿಎಂ ಡಿಕೆ ಶಿವಕುಮಾರ್‌ಗೆ ದೂರು ಸಲ್ಲಿಸಲಾಗಿದೆ. ಗಿರೀಶ್ ಮಟ್ಟಣ್ಣವರ್, ಮಹೇಶ್ ಶೆಟ್ಟಿ ತಿಮರೋಡಿ, ಜಯಂತ್ ಟಿ. ಹಾಗೂ ಸಂಗಡಿಗರ ವಿರುದ್ಧ ದೂರು ನೀಡಲಾಗಿದೆ. ಎಲ್ಲರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಧರ್ಮಸ್ಥಳದ ಶ್ರೀನಿವಾಸ ರಾವ್ ಎಂಬುವರ ನೇತೃತ್ವದಲ್ಲಿ ದೂರು ನೀಡಲಾಗಿದೆ. ಸಿಎಂ ಡಿಕೆ ಶಿವಕುಮಾರ್, ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ಪೊಲೀಸ್ ಮಹಾನಿರ್ದೇಶಕ ಡಾ. ಎಂ. ಎ. ಸಲೀಂಗೆ ದೂರು ನೀಡಲಾಗಿದೆ.
ಧರ್ಮಸ್ಥಳ ತಲೆ ಬುರುಡೆ ಕೇಸ್‌ಗೆ ಸಂಬಂಧಿಸಿದಂತೆ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ನಡೆಸಲಾಗಿದೆ ಎಂದು ಆರೋಪಿಸಿ ಧರ್ಮಸ್ಥಳದ ಶ್ರೀನಿವಾಸ ರಾವ್ ನೇತೃತ್ವದಲ್ಲಿ ಸಿಎಂಗೆ ದೂರು ನೀಡಿದ್ದಾರೆ. ಧರ್ಮಸ್ಥಳ ಗ್ರಾಮದಲ್ಲಿ 1,510 ಅಸಹಜ ಸಾವುಗಳಾಗಿವೆ ಎಂದು ಅಪಪ್ರಚಾರ ಮಾಡಲಾಗಿದೆ. ಆದರೆ ಧರ್ಮಸ್ಥಳ ವ್ಯಾಪ್ತಿಯಲ್ಲಿ ನಡೆದ UDR ಪ್ರಕರಣಗಳು 374 ಮಾತ್ರ. ಹೀಗಾಗಿ ಸುಳ್ಳು ಮಾಹಿತಿ ಹರಡುತ್ತಿರುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ದೂರಿನಲ್ಲಿ ಆಗ್ರಹಿಸಲಾಗಿದೆ.











