ಲಿಟ್ಲ್ ಫ್ಲವರ್ ಶಾಲಾ ಬಾಲಕಿಯರು ಕಬಡ್ಡಿಯಲ್ಲಿ ತಾಲೂಕು ಮಟ್ಟಕ್ಕೆ ಆಯ್ಕೆ

ಪುತ್ತೂರು: ಇಲ್ಲಿನ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಮತ್ತು ಸಂತ ವಿಕ್ಟರನ ಬಾಲಕಿಯರ ಪ್ರೌಢಶಾಲೆಯ ಸಂಯುಕ್ತ ಆಶ್ರಯದಲ್ಲಿ ನಡೆದ ಪುತ್ತೂರು ನಗರ ವಲಯ ಮಟ್ಟದ 14 ಮತ್ತು 17ರ ವಯೋಮಾನದ ಬಾಲಕ ಬಾಲಕಿಯರ ಕಬಡ್ಡಿ ಪಂದ್ಯಾಟದಲ್ಲಿ ದರ್ಬೆ ಲಿಟ್ಲ್ ಫ್ಲವರ್ ಶಾಲೆಯ 14 ವಯೋಮಾನದ ಬಾಲಕಿಯರ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಹಾರ್ದಿಕ ಪಿ. ಸವ್ಯಸಾಚಿ ಆಟಗಾರ್ತಿ ಹಾಗೂ ಜುಏನಾ ಡ್ಯಾಝಲ್ ಕುಟಿನ್ಹ ಉತ್ತಮ ದಾಳಿಗಾರ್ತಿ ಪ್ರಶಸ್ತಿ ಪಡೆದುಕೊಂಡರು.
ಆಟಗಾರ್ತಿಯರಿಗೆ ಶಾಲಾ ಮುಖ್ಯ ಶಿಕ್ಷಕಿ ಭಗಿನಿ ಅನಿತಾ ಟ್ರೆಸ್ಸಿಯವರ ಮಾರ್ಗದರ್ಶನದಲ್ಲಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಶಿಕ್ಷಕ ರಾಷ್ಟ್ರೀಯ ಕಬಡ್ಡಿ ತರಬೇತುದಾರ ಬಾಲಕೃಷ್ಣ ರೈ ಪೊರ್ದಾಲ್ ತರಬೇತಿ ನೀಡಿದ್ದಾರೆ.

Advertisement

Share this article

You cannot copy content of this page