ಮಂಗಳೂರಿನ ಮೂಲ್ಯರ ಯಾನೆ ಕುಲಾಲರ ಮಾತೃಸಂಘದಿಂದ “ವಿದ್ಯಾರ್ಥಿನಿಯರ ಮತ್ತು ಮಹಿಳೆಯರ ಉಚಿತ ವಸತಿ ನಿಲಯ”ದ ವಿಜ್ಞಾಪನಾ ಪತ್ರ ಬಿಡುಗಡೆ

ಮಂಗಳೂರು : ಇಲ್ಲಿನ ದ.ಕ ಜಿಲ್ಲಾ ಮೂಲ್ಯರ ಯಾನೆ ಕುಲಾಲರ ಮಾತೃ ಸಂಘ (ರಿ) ಅವರ ಆಶ್ರಯದಲ್ಲಿ ಮಾತೃ ಸಂಘದ ಶತಮಾನೋತ್ಸವ ಸಂಭ್ರಮದ ಅಂಗವಾಗಿ ನಗರದ ಕುಲಶೇಖರದಲ್ಲಿ ನಿರ್ಮಾಣಗೊಳ್ಳಲಿರುವ ಮಾತೃಸಂಘದ ಹೆಮ್ಮೆಯ ಯೋಜನೆ “ವಿದ್ಯಾರ್ಥಿನಿಯರ ಮತ್ತು ಮಹಿಳೆಯರ ಉಚಿತ ವಸತಿ ನಿಲಯ”ದ ವಿಜ್ಞಾಪನಾ ಪತ್ರವನ್ನು ಸಂಘದ ಮಾಸಿಕ ಸಭೆಯಲ್ಲಿ ಸಂಘದ ಪದಾಧಿಕಾರಿಗಳ ಸಮ್ಮುಖದಲ್ಲಿ ಮಂಗಳೂರಿನ ಟೆಲಿಕಾಂ ಹೌಸ್‌ ರಸ್ತೆಯ ಪೊಲೀಸ್‌ ಲೇನ್‌ನಲ್ಲಿರುವ ಮೂಲ್ಯರ ಯಾನೆ ಕುಲಾಲರ ಮಾತೃಸಂಘ ಕಛೇರಿಯಲ್ಲಿ ಬಿಡಗಡೆಗೊಳಿಸಲಾಯಿತು.

ಕುಲಶೇಖರ ಶ್ರೀ ವೀರನಾರಾಯಣ ಸೇವಾ ಟ್ರಸ್ಟ್‌ನ ಅಧ್ಯಕ್ಷ ಪ್ರೇಮಾನಂದ ಕುಲಾಲ್ ಕೋಡಿಕಲ್ ಹಾಗೂ ಬಂಟ್ವಾಳ ಸಮಾಜ ಸೇವಾ ಸಹಕಾರಿ ಬ್ಯಾಂಕ್‌ನ ಅಧ್ಯಕ್ಷ ಸುರೇಶ್ ಕುಲಾಲ್ ವಿಜ್ಞಾಪನ ಪತ್ರ ಬಿಡುಗಡೆಗೊಳಿಸಿದರು.

Advertisement

ಕಾರ್ಯಕ್ರಮದ ಅಧ್ಯಕ್ಷತೆಯನ್ನು ದ.ಕ ಮೂಲ್ಯರ ಯಾನೆ ಕುಲಾಲರ ಮಾತೃ ಸಂಘದ ಅಧ್ಯಕ್ಷ ಮಯೂರ್ ಉಳ್ಳಾಲ್ ವಹಿಸಿದ್ದರು.
ವೀರನಾರಾಯಣ ದೇವಸ್ಥಾನದ ಅಧ್ಯಕ್ಷ ಸುಂದರ್ ಕುಲಾಲ್ ಶಕ್ತಿನಗರ ಹಾಗು ಜಿಲ್ಲಾ ಸಂಘದ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.

ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ 2025 ಜುಲೈ 08 ರಂದು ಬಿಡುಗಡೆಗೊಳಿಸಿದ ಸಾರ್ವಜನಿಕ ಸೇವಾಸೌಲಭ್ಯದ ನಿವೇಶನಾ ಮಂಜೂರಾತಿ ಪತ್ರದ ಪ್ರತಿ ಇಲ್ಲಿದೆ.

Share this article

You cannot copy content of this page