ಉಡುಪಿಯಲ್ಲಿ ಮದ್ಯ ಮಾರಾಟ ನಿಷೇಧ ; ಕಾರಣವೇನು?!!

ಉಡುಪಿ: ಶಾಂತಿಯುತವಾಗಿ ಗಣೇಶೋತ್ಸವ ಆಚರಣೆ ಹಾಗೂ ಜಿಲ್ಲೆಯಲ್ಲಿ ಶಾಂತಿ, ಸುವ್ಯವಸ್ಥೆ ಮತ್ತು ಕಾನೂನು ಪಾಲನೆ ಕಾಪಾಡುವ ಉದ್ದೇಶದಿಂದ ಉಡುಪಿ ಜಿಲ್ಲೆಯಲ್ಲಿ ಮೂರು ದಿನ ನಿರ್ಧಿಷ್ಟ ಅವಧಿಯಲ್ಲಿ ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಆದೇಶ ಹೊರಡಿಸಿದ್ದಾರೆ.
ಸೆ.14ರಂದು ಬೆಳಗ್ಗೆ 6ರಿಂದ ರಾತ್ರಿ 12ರವರೆಗೆ ಜಿಲ್ಲೆಯಾದ್ಯಂತ ಸಂಪೂರ್ಣ ಮದ್ಯ ಮಾರಾಟ ನಿಷೇಧ ಜಾರಿಯಲ್ಲಿರಲಿದೆ.
ಸೆ.16ರಂದು ಮಧ್ಯಾಹ್ನ 2ರಿಂದ ರಾತ್ರಿ 12ರವರೆಗೆ ಉಡುಪಿ ನಗರ ವ್ಯಾಪ್ತಿಯಲ್ಲಿ ಮದ್ಯ ಮಾರಾಟಕ್ಕೆ ನಿರ್ಬಂಧ ವಿಧಿಸಲಾಗಿದೆ. ಸೆ.18ರಂದು ಮಧ್ಯಾಹ್ನ 2ರಿಂದ ರಾತ್ರಿ 12ರವರೆಗೆ ಗಣೇಶ ಮೂರ್ತಿ ವಿಸರ್ಜನೆ ನಡೆಯುವ ವಿವಿಧ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಮದ್ಯ ಮಾರಾಟ ನಿಷೇಧಿಸಲಾಗಿದೆ.

ಗಣೇಶೋತ್ಸವ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಈ ಆದೇಶ ಹೊರಡಿಸಲಾಗಿದೆ. ನಿಷೇಧಿತ ಅವಧಿಯಲ್ಲಿ ಮದ್ಯದಂಗಡಿಗಳು, ಬಾರ್‌ಗಳು ಮುಚ್ಚಬೇಕೆಂದು ಜಿಲ್ಲಾಧಿಕಾರಿ ಸೂಚಿಸಿದ್ದಾರೆ.
ಇನ್ನು ದಕ್ಷಿಣ ಕನ್ನಡ ಜಿಲ್ಲೆಯ ಕುರಿತು ಮಾಹಿತಿ ಇನ್ನಷ್ಟೇ ಬರಬೇಕಿದೆ.

Advertisement

Share this article

You cannot copy content of this page