ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನಾಚರಣೆ ಪ್ರಯುಕ್ತ ಉಚಿತ ಆರೋಗ್ಯ ತಪಾಸಣೆ ಹಾಗೂ ರಕ್ತದಾನ

ಪುತ್ತೂರು: ಇಲ್ಲಿನ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ತಾಲೂಕು ಘಟಕ ಹಾಗೂ ದ. ಕ. ಜಿಲ್ಲಾ ಉಪ ವಲಯಾರಣ್ಯಾಧಿಕಾರಿಗಳ ಸಂಘ ಮತ್ತು ದ.ಕ. ಜಿಲ್ಲಾ ಅರಣ್ಯ ವೀಕ್ಷಕ ಹಾಗೂ ಗಸ್ತು ಅರಣ್ಯಪಾಲಕರ ಸಂಘಗಳ ಸಂಯುಕ್ತ ಆಶ್ರಯದಲ್ಲಿ ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನಾಚರಣೆ ಪ್ರಯುಕ್ತ ಉಚಿತ ಆರೋಗ್ಯ ತಪಾಸಣೆ ಹಾಗೂ ರಕ್ತದಾನ ಕಾರ್ಯಕ್ರಮಗಳು ಸೆ.11ರಂದು ಸರಕಾರಿ ನೌಕರರ ಸಂಘದ ಕಟ್ಟಡದ ಮೇರಿ ದೇವಾಸಿಯಾ ಸಭಾಂಗಣದಲ್ಲಿ ನಡೆಯಿತು.
ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದ ತಾಲೂಕು ಆರೋಗ್ಯಾಧಿಕಾರಿ ಡಾ. ದೀಪಕ್ ರೈ ಅವರು ಸ್ವತಃ ರಕ್ತದಾನ ಮಾಡುವ ಮೂಲಕ ಚಾಲನೆ ನೀಡಿದರು. ನಂತರ ಆರೋಗ್ಯ ತಪಾಸಣೆ, ರಕ್ತದಾನ ಶಿಬಿರಗಳು ನೆರವೇರಿತು.

ಅಪರಾಹ್ನ ನಡೆದ ಸಭಾಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿದ್ದ ಮಂಗಳೂರು ಕೆಸಿಡಿಸಿ ವಿಭಾಗೀಯ ವ್ಯವಸ್ಥಾಪಕ ಶ್ರೀಧ‌ರ್ ಪಿ. ಮಾತನಾಡಿ, ಅರಣ್ಯ ಪ್ರಾಕೃತಿಕ ಸಂಪತ್ತು. ಇಂತಹ ಸಂಪತ್ತನ್ನು ರಕ್ಷಣೆ ಮಾಡುವಲ್ಲಿ ಹುತಾತ್ಮರಾದ ಹಸಿರು ಯೋಧರನ್ನು ನೆನಪಿಸುವ ಅರಣ್ಯ ಹುತಾತ್ಮರ ದಿನಾಚರಣೆ ಕೇವಲ ಸ್ಮರಣೆ ಮಾತ್ರವಲ್ಲ. ಕಾರ್ಯಕ್ರಮದ ಮೂಲಕ ಅರಣ್ಯ ಸಂಪತ್ತಿನ ಬಗ್ಗೆ ಜನರಿಗೆ ಅರಿವು ಮೂಡಿಸಬೇಕು ಎಂದರು. ರಕ್ತದಾನದ ಬಗ್ಗೆ ಭಯ, ಅಂಜಿಕೆ ಪಡಬೇಕಾಗಿಲ್ಲ. ನಮ್ಮ ಆರೋಗ್ಯಕ್ಕೆ ಯಾವುದೇ ಸಮಸ್ಯೆಯಿಲ್ಲ ಎಂದು ಹೇಳಿದ ಅವರು ನಾನು ೫೫ ಬಾರಿ ರಕ್ತದಾನ ಮಾಡಿದ್ದು ನನಗೆ ಶುಗರ್, ಬಿಪಿಯಂತ ಖಾಯಿಲೆಯಿಂದ ನಾನು ಮುಕ್ತನಾಗಿದ್ದೇನೆ ಎಂದು ಹೇಳಿದರು.

Advertisement

ಪುತ್ತೂರು ವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಸುಬ್ಬಯ್ಯ ನಾಯ್ಕ ಮಾತನಾಡಿ, ರಕ್ತದಾನ ಶ್ರೇಷ್ಠ ದಾನ. ನೀವು ದಾನ ಮಾಡಿದ ರಕ್ತ ಬಡವರ ಜೀವ ಉಳಿಸಲು ಸಹಕಾರಿಯಾಗಿದ್ದು ಒತ್ತಡದ ವೃತ್ತಿಯ ನಡುವೆ ಜೀವದಾನದ ಉತ್ತಮ ಕಾರ್ಯ ಆಯೋಜಿಸಿರುವುದನ್ನು ಶ್ಲಾಘಿಸಿದರು.
ಸುಳ್ಯ ಉಪ ವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಪ್ರಶಾಂತ್ ಕುಮಾರ್ ಪೈ ಮಾತನಾಡಿ, ಅರಣ್ಯ ಹುತಾತ್ಮರ ದಿನಾಚರಣೆಯ ಅಂಗನವಾಗಿ ನಡೆದ ರಕ್ತದಾನ ಹಾಗೂ ಆರೋಗ್ಯ ರಪಾಸಣೆಯನ್ನು ಅಚ್ಚುಕಟ್ಟಾಗಿ ನಡೆಸುವ ಮೂಲಕ ಇಲಾಖೆಯ ಸಿಬ್ಬಂದಿಗಳು ವೃತ್ತಿಯಲ್ಲಿ ಮಾತ್ರವಲ್ಲದೆ ಸಮಾಜ ಸೇವೆಯನ್ನು ಶಿಸ್ತುಬದ್ಧವಾಗಿ ನಡೆಸಿದ್ದಾರೆ. ಇದು ಎಲ್ಲರಿಗೂ ಪ್ರೇರಣೆಯಾಗಿದೆ ಎಂದರು.
ರೋಟರಿ ಬ್ಲಡ್ ಬ್ಯಾಂಕ್‌ನ ವೈದ್ಯಾಧಿಕಾರಿ ಡಾ.ರಾಮಕೃಷ್ಣ ರಾವ್ ಮಾತನಾಡಿ, ರಕ್ತದಾನದ ಮಹತ್ವ ಹಾಗೂ ರಕ್ತದಾನಿಗಳು ಮಾಡಬೇಕು ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ಮಾಹಿತಿ ನೀಡಿದರು.

ಕಾರ್ಯಕ್ರಮದ ಅತಿಥಿಗಳಾದ ಮಂಗಳೂರು ಕೆಸಿಡಿಸಿ ವಿಭಾಗೀಯ ವ್ಯವಸ್ಥಾಪಕ ಶ್ರೀಧರ್ ಪಿ., ಸುಳ್ಯ ಉಪ ವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಪ್ರಶಾಂತ್ ಕುಮಾರ್ ಪೈ, ಉಪ ಅರಣ್ಯ ಸಂರಕ್ಷಣಾಧಿಕಾರಿ ಪ್ರವೀಣ್‌ ಕುಮಾ‌ರ್ ಶೆಟ್ಟಿ, ಸರಕಾರಿ ನೌಕರರ ಸಂಘದ ಅಧ್ಯಕ್ಷ ಶಿವಾನಂದ ಆಚಾರ್ಯ, ಉಪ ವಲಯ ಅರಣ್ಯಾಧಿಕಾರಿಗಳ ಸಂಘದ ಅಧ್ಯಕ್ಷ ಯೋಗೀಶ್ ಜಿ.ಸಿ., ರಾಜ್ಯ ಗಸ್ತು ಅರಣ್ಯ ಪಾಲಕರ ಹಾಗೂ ಅರಣ್ಯ ವೀಕ್ಷಕರ ಸಂಘದ ಅಧ್ಯಕ್ಷ ಜಿತೇಶ್‌, ವಲಯಾರಣ್ಯಾಧಿಕಾರಿಗಳಾದ ಪುತ್ತೂರಿನ ಕಿರಣ್ ಬಿ.ಎಂ., ಸುಳ್ಯದ ನಿರಂಜನ ಶೆಟ್ಟಿ, ಸುಬ್ರಹ್ಮಣ್ಯದ ಚೇತನ್ ಬಿ.ಕೆ., ಬೆಳ್ತಂಗಡಿಯ ಮಹೇಶ್ ದೇವಾಡಿಗ ಹಾಗೂ ಉಪ ವಲಯಾರಣ್ಯಾಧಿಕಾರಿಗಳು, ಗಸ್ತು ಹಾಗೂ ಅರಣ್ಯ ಪಾಲಕರು ಸಹಿತ 55 ಮಂದಿ ರಕ್ತದಾನ ಮಾಡಿದರು. ಉಚಿತ ವೈದ್ಯಕೀಯ ತಪಾಸಣೆಯಲ್ಲಿ ಶುಗರ್, ಬಿಪಿ ಹಾಗೂ ಸಾಮಾನ್ಯ ತಪಾಸಣೆಗಳನ್ನು ನಡೆಸಲಾಯಿತು.

ಉಪ ಅರಣ್ಯ ಸಂರಕ್ಷಣಾಧಿಕಾರಿಗಳು ಮತ್ತು ಅರಣ್ಯ ಸಂರಕ್ಷಣಾಧಿಕಾರಿಗಳ ತಾಂತ್ರಿಕ ಸಹಾಯಕ ಪ್ರವೀಣ್ ಕುಮಾರ್ ಶೆಟ್ಟಿ, ಸರಕಾರಿ ನೌಕರರ ಸಂಘದ ಅಧ್ಯಕ್ಷ ಶಿವಾನಂದ ಆಚಾರ್ಯ, ರಾಜ್ಯ ಗಸ್ತು ಅರಣ್ಯ ಪಾಲಕರ ಹಾಗೂ ಅರಣ್ಯ ವೀಕ್ಷಕರ ಸಂಘದ ಅಧ್ಯಕ್ಷ ಜಿತೇಶ್‌,ಸರಕಾರಿ ನೌಕರರ ಸಂಘದ ಕಾರ್ಯದರ್ಶಿ ಅಬ್ರಹಾಂ ಎಸ್.ಎ, ಉಪ ವಲಯಾರಣ್ಯಾಧಿಕಾರಿಗಳ ಸಂಘದ ಅಧ್ಯಕ್ಷ ಯೋಗೀಶ್ ಜಿ.ಸಿ. ಸುಳ್ಯದ ಉಪ ವಲಯಾರಣ್ಯಾಧಿಕಾರಿ ವೆಂಕಟೇಶ್, ಸರಕಾರಿ ನೌಕರರ ಸಂಘದ ನಿರ್ದೇಶಕಿ, ಕಾರ್ಮಿಕ ಇಲಾಖೆಯ ಸಾವಿತ್ರಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.

Share this article

You cannot copy content of this page