ಡಾ. ಅಂಕಿತಾ ಮೇಲೆ ಗಂಭೀರ ಆರೋಪ! ಅಷ್ಟಕ್ಕೂ ಶಾಸಕರ ಸೊಸೆ ಮಾಡಿದ್ದೇನು?

ಬಾಗಲಕೋಟೆ: ಕಾಂಗ್ರೆಸ್ ಶಾಸಕ ಉಮೇಶ್ ಮೇಟಿ ಅವರ ಸೊಸೆ ಡಾ. ಅಂಕಿತಾ ಯರಗಲ್ ಅವರು ಜಿಲ್ಲಾ ಆರೋಗ್ಯ ಇಲಾಖೆಯಲ್ಲಿ ನಿಯಮಗಳನ್ನು ಮೀರಿ ಅಕ್ರಮ ಎಸಗಿರುವ ಆರೋಪ ಕೇಳಿಬಂದಿದೆ.
ಜಿಲ್ಲಾ ಆರೋಗ್ಯ ಅಧಿಕಾರಿ ಡಾ. ರಾಜಕುಮಾರ ಯರಗಲ್ ಅವರ ಪುತ್ರಿ ಹಾಗೂ ಉಮೇಶ್ ಮೇಟಿ ಅವರ ಸೊಸೆ ಡಾ. ಅಂಕಿತಾ ಯರಗಲ್ ಅವರು ಪೂರ್ಣಾವಧಿ ಸ್ನಾತಕೋತ್ತರ(MD) ವ್ಯಾಸಂಗ ಮಾಡುತ್ತಿದ್ದು, ಪ್ರತಿ ತಿಂಗಳು ಸರ್ಕಾರದಿಂದ 75,000 ರೂ. ವೇತನ ಪಡೆಯುತ್ತಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ.

Advertisement

ಡಾ. ಅಂಕಿತಾ ಯರಗಲ್ ಅವರು 2025ರ ಸೆಪ್ಟೆಂಬರ್‌ನಿಂದ ಬಾಗಲಕೋಟೆಯ ವಾಂಬೆ ಕಾಲೋನಿಯ ‘ನಮ್ಮ ಕ್ಲಿನಿಕ್‌’ಗೆ ವೈದ್ಯಾಧಿಕಾರಿಯಾಗಿ ನೇಮಕಗೊಂಡಿದ್ದರು. ತದನಂತರ, 2026ರ ಮಾರ್ಚ್‌ನಲ್ಲಿ ಬಾಗಲಕೋಟೆಯ ಎಸ್.ಎನ್. ಮೆಡಿಕಲ್ ಕಾಲೇಜಿನಲ್ಲಿ ಎಂ.ಡಿ. (ಪ್ಯಾಥಾಲಜಿ) ಕೋರ್ಸ್‌ಗೆ ಪ್ರವೇಶ ಪಡೆದು ಏಪ್ರಿಲ್‌ನಿಂದ ತರಗತಿಗಳಿಗೆ ಹಾಜರಾಗುತ್ತಿದ್ದಾರೆ.

Advertisement
Advertisement

ನಿಯಮಗಳ ಪ್ರಕಾರ ಬೆಳಗ್ಗೆ 9 ರಿಂದ ಸಂಜೆ 4:30 ರವರೆಗೆ ನಮ್ಮ ಕ್ಲಿನಿಕ್‌ನಲ್ಲಿ ಕರ್ತವ್ಯ ನಿರ್ವಹಿಸಬೇಕಾದ ಅಂಕಿತಾ, ಕಾಲೇಜಿನಲ್ಲಿ ಪೂರ್ಣಾವಧಿ ಶಿಕ್ಷಣ ಪಡೆಯುತ್ತಿರುವುದರಿಂದ ಕ್ಲಿನಿಕ್‌ಗೆ ಸರಿಯಾಗಿ ಹಾಜರಾಗುತ್ತಿಲ್ಲ. ಇದರಿಂದ ಸಾರ್ವಜನಿಕರಿಗೆ ಸಿಗದೆ ವಾಂಬೆ ಕಾಲೋನಿಯ ನಮ್ಮ ಕ್ಲಿನಿಕ್ ಬಹುತೇಕ ಬಂದ್ ಆದ ಸ್ಥಿತಿಯಲ್ಲಿದೆ.
ಸರ್ಕಾರಿ ನಿಯಮಾವಳಿ ಪ್ರಕಾರ ಎಂ.ಡಿ. ವ್ಯಾಸಂಗ ಮಾಡುತ್ತಾ ಸರ್ಕಾರಿ ಸೇವೆಯ ವೇತನ ಪಡೆಯುವುದು ಕಾನೂನುಬಾಹಿರವಾಗಿದೆ.

Share this article

Subscribe

By pressing the Subscribe button, you confirm that you have read our Privacy Policy.

Latest News

Advertisement

More News

You cannot copy content of this page