ಸೌದಿ ಅರೇಬಿಯಾದ ವಿಮಾನ ನಿಲ್ದಾಣದ ಮೇಲೆ ಹೌತಿ ಬಂಡುಕೋರರ ದಾಳಿ! ಭಾರತೀಯ ಪ್ರಜೆ ಸೇರಿ ಇಬ್ಬರು ಸಾವು!!

ಸೌದಿ ಅರೇಬಿಯಾದ ದಮ್ಮಾಮ್ ವಿಮಾನ ನಿಲ್ದಾಣದ ಮೇಲೆ ಬುಧವಾರ ತಡರಾತ್ರಿ ನಡೆದ ದಾಳಿಯಲ್ಲಿ ಭಾರತೀಯ ಪ್ರಜೆ ಸೇರಿ ಇಬ್ಬರು ಮೃತಪಟ್ಟಿದ್ದು, ಮತ್ತಿಬ್ಬರು ಗಂಭೀರ ಗಾಯಗೊಂಡಿರುವುದಾಗಿ ಸೌದಿ ನಾಗರಿಕ ವಿಮಾನಯಾನ ಪ್ರಾಧಿಕಾರ ಗುರುವಾರ ತಿಳಿಸಿದೆ.

Advertisement

ದಾಳಿಯಲ್ಲಿ ಮೃತಪಟ್ಟವರಲ್ಲಿ ಓರ್ವ ಭಾರತೀಯ ಪ್ರಜೆಯಾಗಿದ್ದು ಮತ್ತೋರ್ವ ಸೌದಿ ಅರೇಬಿಯಾದ ಪ್ರಜೆಯಾಗಿದ್ದಾರೆ. ವಿಮಾನ ನಿಲ್ದಾಣಕ್ಕೆ ಉಂಟಾಗಿರುವ ಹಾನಿಯ ಪ್ರಮಾಣವನ್ನು ಅಧಿಕಾರಿಗಳು ಪರಿಶೀಲಿಸುತ್ತಿದ್ದಾರೆ ಎಂದು ಪ್ರಾಧಿಕಾರ ಹೇಳಿದೆ. ಇತ್ತೀಚಿನ ವಾರಗಳಲ್ಲಿ ಸೌದಿ ಅರೇಬಿಯಾದ ತೈಲ ಮೂಲಸೌಕರ್ಯ ಮತ್ತು ನಾಗರಿಕ ಸೌಲಭ್ಯಗಳ ಮೇಲೆ ಯೆಮನ್‌ನ ಹೌತಿ ಬಂಡುಕೋರರ ದಾಳಿಗಳು ತೀವ್ರಗೊಂಡಿವೆ. ಇದರಿಂದಾಗಿ ಸೌದಿಯ ಪ್ರಮುಖ ವಿಮಾನ ನಿಲ್ದಾಣವನ್ನು ಮುಚ್ಚುವ ಪರಿಸ್ಥಿತಿ ನಿರ್ಮಾಣವಾಗಿದ್ದು, ಪ್ರಮುಖ ಹೂಡಿಕೆ ಸಮ್ಮೇಳನವನ್ನೂ ಮುಂದೂಡಲಾಗಿದೆ ಎಂದು ಜಾಲತಾಣ ಮೂಲಗಳು ವರದಿ ಮಾಡಿವೆ.

Advertisement
Advertisement

ಈ ತಿಂಗಳಿನಲ್ಲಿ ಸೌದಿ ಅರೇಬಿಯಾದ ವಿಮಾನ ನಿಲ್ದಾಣಗಳ ಮೇಲೆ ನಡೆದ ದಾಳಿಗಳಲ್ಲಿ ಒಟ್ಟು 22 ಮಂದಿ ಮೃತಪಟ್ಟಿದ್ದಾರೆ ಎಂದು ಅಧಿಕೃತ ಅಂಕಿಅಂಶಗಳನ್ನು ಆಧರಿಸಿದ ಎಎಫ್‌ಪಿ ವರದಿ ತಿಳಿಸಿದೆ. ಭಾರತೀಯ ರಾಯಭಾರ ಕಚೇರಿ ಪ್ರತಿಕ್ರಿಯೆ: ರಿಯಾದ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿಯು ಘಟನೆಯನ್ನು ಖಂಡಿಸಿದ್ದು, ಸಂತ್ರಸ್ತ ಕುಟುಂಬಗಳೊಂದಿಗೆ ಸಂಪರ್ಕದಲ್ಲಿದೆ. ಅಗತ್ಯವಿರುವ ಎಲ್ಲಾ ರಾಯಭಾರ ಮತ್ತು ವೈದ್ಯಕೀಯ ನೆರವು ನೀಡುವುದಾಗಿ ಭರವಸೆ ನೀಡಿದೆ.

Share this article

Subscribe

By pressing the Subscribe button, you confirm that you have read our Privacy Policy.

Latest News

Advertisement

More News

You cannot copy content of this page